ಸೋಮವಾರ, 22 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ದೆಹಲಿ | ಕೇಜ್ರಿವಾಲ್ ಬಿಡುಗಡೆಗೆ ಒತ್ತಾಯ; ಬಿಜೆಪಿ ಕಚೇರಿ ಬಳಿ AAP ಪ್ರತಿಭಟನೆ

Published 29 ಜೂನ್ 2024, 14:02 IST
Last Updated 29 ಜೂನ್ 2024, 14:02 IST
ಅಕ್ಷರ ಗಾತ್ರ

ನವದೆಹಲಿ: ಸಿಬಿಐ ವಶದಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಬಿಡುಗಡೆಗೆ ಒತ್ತಾಯಿಸಿ ಎಎಪಿ ಮುಖಂಡರು ಮತ್ತು ಕಾರ್ಯಕರ್ತರು ಪಂಡಿತ್ ದೀನ ದಯಾಳ್ ಉಪಾಧ್ಯಾಯ(ಡಿಡಿಯು) ಮಾರ್ಗದಲ್ಲಿರುವ ಬಿಜೆಪಿ ಕೇಂದ್ರ ಕಚೇರಿ ಬಳಿ ಶನಿವಾರ ಪ್ರತಿಭಟನೆ ನಡೆಸಿದರು. 

ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿದ ಕಾರ್ಯಕರ್ತರು ಮತ್ತು ಮುಖಂಡರು, ಕೇಜ್ರಿವಾಲ್ ಅವರನ್ನು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು. ಅಲ್ಲದೆ, ಕೇಂದ್ರ ಸಂಸ್ಥೆಗಳ ದುರುಪಯೋಗ ಮತ್ತು ಸರ್ವಾಧಿಕಾರವನ್ನು ಅಂತ್ಯಗೊಳಿಸಬೇಕು ಎಂಬ ಭಿತ್ತಿಪತ್ರಗಳನ್ನು ಪ್ರತಿಭಟನಕಾರರು ಪ್ರದರ್ಶಿಸಿದರು. 

ಪ್ರತಿಭಟನಕಾರರು ಮೆರವಣಿಗೆ ಮೂಲಕ ಬಿಜೆಪಿ ಕಚೇರಿಗೆ ತೆರಳಲು ಮುಂದಾಗಿದ್ದರು. ಆದರೆ, ಇದಕ್ಕೆ ಅವಕಾಶ ಪಡೆಯದ ಕಾರಣದಿಂದಾಗಿ ಪ್ರತಿಭಟನಕಾರರನ್ನು ಮಧ್ಯೆದಲ್ಲೇ ತಡೆಯಲಾಯಿತು. ಜೊತೆಗೆ ಭದ್ರತೆಗಾಗಿ ಅಗತ್ಯ ಕ್ರಮಕೈಗೊಳ್ಳಲಾಗಿತ್ತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು. 

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳವು ಕೇಜ್ರಿವಾಲ್ ಅವರನ್ನು ಬಂಧಿಸಿದೆ. 

ಎಎಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ

ಜಮ್ಮು (ಪಿಟಿಐ): ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿಯ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಅವರ ಬಂಧನ ವಿರೋಧಿಸಿ ಇಲ್ಲಿನ ಬಿಜೆಪಿ ಕಚೇರಿ ಬಳಿ ಎಎಪಿ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದರು.  ಈ ವೇಳೆ 20ಕ್ಕೂ ಹೆಚ್ಚು ಎಎಪಿಯ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. 

ಕೇಜ್ರಿವಾಲ್ ಬಂಧನ ವಿರೋಧಿಸಿ ರಾಷ್ಟ್ರದಾದ್ಯಂತ ಎಎಪಿ ಹಮ್ಮಿಕೊಂಡ ಪ್ರತಿಭಟನೆ ಭಾಗವಾಗಿ ಜಮ್ಮುವಿನ ತ್ರಿಕೂಟ ನಗರದಲ್ಲಿ ಪಕ್ಷದ ಮುಖಂಡ  ಓಂ ಪ್ರಕಾಶ್ ಖಜೂರಿಯಾ ನೇತೃತ್ವದಲ್ಲಿ ಎಎಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಈ ವೇಳೆ ಕಾರ್ಯಕರ್ತರು ಮೆರವಣಿಗೆ ಮೂಲಕ ಬಿಜೆಪಿ ಕಚೇರಿಯತ್ತ ತೆರಳಲು ಯತ್ನಿಸಿದರು. ಆಗ ಪೊಲೀಸರು ಎಎಪಿ ಕಾರ್ಯಕರ್ತರನ್ನು ತಡೆದರು.

ನಮ್ಮ ಪಕ್ಷದ ನಾಯಕನ ಅಕ್ರಮ ಬಂಧನ ವಿರೋಧಿಸಿ ಜಮ್ಮುವಿನಲ್ಲಿರುವ ಬಿಜೆಪಿ ಕಚೇರಿಗೆ ಘೇರಾವ್ ಹಾಕಲು ಯೋಜಿಸಿದ್ದೆವು. ಆದರೆ ಪೊಲೀಸರು ನಮ್ಮನ್ನು ವಶಕ್ಕೆ ಪಡೆದಿದ್ದಾರೆ.
–ಓಂ ಪ್ರಕಾಶ್ ಖಜೂರಿಯಾ, ಬಿಜೆಪಿ ಮುಖಂಡ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT