ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮನವಮಿ ದಿನ ಎಎಪಿಯಿಂದ ‘ಆಪ್‌ ಕಾ ರಾಮರಾಜ್ಯ’ ವೆಬ್‌ಸೈಟ್‌ ಬಿಡುಗಡೆ

Published 17 ಏಪ್ರಿಲ್ 2024, 6:34 IST
Last Updated 17 ಏಪ್ರಿಲ್ 2024, 6:34 IST
ಅಕ್ಷರ ಗಾತ್ರ

ನವದೆಹಲಿ: ಪಕ್ಷದ ರಾಮರಾಜ್ಯ ಪರಿಕಲ್ಪನೆಯನ್ನು ಪ್ರದರ್ಶಿಸುವ ‘ಆಪ್ ಕಾ ರಾಮರಾಜ್ಯ’ ವೆಬ್‌ಸೈಟ್‌ ಅನ್ನು ಆಮ್‌ ಆದ್ಮಿ ಪಕ್ಷ ಬುಧವಾರ ಲೋಕಾರ್ಪಣೆ ಮಾಡಿತು.

ವೆಬ್‌ಸೈಟ್‌ ಬಿಡುಗಡೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಎಪಿ ರಾಜ್ಯಸಭಾ ಸಂಸದ ಸಂಜಯ್ ಸಿಂಗ್, ಈ ವೆಬ್‌ಸೈಟ್ ಎಎಪಿಯ ರಾಮರಾಜ್ಯ ಪರಿಕಲ್ಪನೆಯನ್ನು ಮತ್ತು ‍ಪಕ್ಷ ಮಾಡಿದ ಕೆಲಸಗಳ ಬಗ್ಗೆ ಮಾಹಿತಿ ನೀಡುತ್ತದೆ ಎಂದರು.

‘ಕಳೆದ 10 ವರ್ಷಗಳಲ್ಲಿ ರಾಮರಾಜ್ಯ ಪರಿಕಲ್ಪನೆ ಸಾಕಾರಗೊಳಿಸಲು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ದೆಹಲಿಯಲ್ಲಿ ಅದ್ಭುತವಾದ ಕೆಲಸಗಳನ್ನು ಮಾಡಿದ್ದಾರೆ. ಉತ್ತಮ ಶಾಲೆಗಳು, ಮೊಹಲ್ಲಾ ಚಿಕಿತ್ಸಾಲಯಗಳು, ಬಸ್‌ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಹೀಗೆ ಅನೇಕ ಯೋಜನೆಗಳನ್ನು ತರಲಾಗಿದೆ’ ಎಂದರು.

‘ರಾಮನವಮಿಯಂದು ಕೇಜ್ರಿವಾಲ್ ತಮ್ಮ ಜನರ ನಡುವೆ ಇಲ್ಲದಿರುವುದು ಇದೇ ಮೊದಲು. ಕೇಜ್ರಿವಾಲ್ ಅವರನ್ನು ಆಧಾರರಹಿತ ಪ್ರಕರಣದಲ್ಲಿ ಸುಳ್ಳು ಸಾಕ್ಷಿಗಳ ಹೇಳಿಕೆಗಳ ಆಧಾರದ ಮೇಲೆ ಜೈಲಿಗೆ ಕಳುಹಿಸಲಾಗಿದೆ’ ಎಂದು ಆರೋಪಿಸಿದರು.

ಈ ವೇಳೆ ಸಚಿವೆ ಅತಿಶಿ, ಪಕ್ಷದ ಮುಖಂಡರಾದ ಸೌರಭ್ ಭಾರದ್ವಾಜ್ ಮತ್ತು ಜಾಸ್ಮಿನ್ ಶಾ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT