ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಜರಾತ್‌ನಲ್ಲಿ ಎಎಪಿ ಸಿಎಂ ಅಭ್ಯರ್ಥಿ ಯಾರು? ನಿರ್ಧಾರ ಜನರಿಗೆ ಬಿಟ್ಟ ಕೇಜ್ರಿವಾಲ್

Last Updated 29 ಅಕ್ಟೋಬರ್ 2022, 7:42 IST
ಅಕ್ಷರ ಗಾತ್ರ

ಸೂರತ್‌: ಗುಜರಾತ್‌ನಲ್ಲಿ ಆಮ್‌ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಯಾರಾಗಿರಬೇಕು ಎಂಬುದನ್ನು ತೀರ್ಮಾನಿಸುವ ಅಧಿಕಾರವನ್ನು ಕೇಜ್ರಿವಾಲ್‌ ಅವರು ಮತದಾರರಿಗೇ ನೀಡಿದ್ದಾರೆ.

ಗುಜರಾತ್‌ ಪ್ರವಾಸ ಕೈಗೊಂಡಿರುವ ಆಮ್‌ ಆದ್ಮಿ ಪಕ್ಷದ ಸಂಚಾಲಕ, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಈ ಬಗ್ಗೆ ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ.

‘ಮುಂದಿನ ಸಿಎಂ ಅಭ್ಯರ್ಥಿ ಯಾರಾಗಬೇಕು ಎಂಬುದನ್ನು ಗುಜರಾತ್ ಜನತೆಯೇ ಹೇಳಬೇಕೆಂದು ನಾನು ಬಯಸುತ್ತೇನೆ. ನಾವು ದೂರವಾಣಿ ಸಂಖ್ಯೆ ಮತ್ತು ಇಮೇಲ್ ಐಡಿಯನ್ನು ನೀಡುತ್ತಿದ್ದೇವೆ. ನವೆಂಬರ್ 3 ರಂದು ಸಂಜೆ 5ರ ಒಳಗಾಗಿ ಜನ ತಮ್ಮ ಅಭಿಪ್ರಾಯಗಳನ್ನು ತಿಳಿಸಬಹುದು. ನವೆಂಬರ್ 4ರಂದು ಫಲಿತಾಂಶವನ್ನು (ಎಎಪಿಯಿಂದ ಸಿಎಂ ಅಭ್ಯರ್ಥಿ ಯಾರಾಗಬೇಕು ಎಂಬುದನ್ನು) ಪ್ರಕಟಿಸುತ್ತೇವೆ’ ಎಂದು ಅವರು ಹೇಳಿದ್ದಾರೆ.

‘ಸಾರ್ವಜನಿಕರು 6357000360ಗೆ ಕರೆ ಮಾಡಿ, ಸಂದೇಶ, ಧ್ವನಿ ಸಂದೇಶ ಕಳುಹಿಸಿ, ವಾಟ್ಸ್‌ಆ್ಯಪ್‌ ಮಾಡಿ ತಮ್ಮ ಆಯ್ಕೆ ತಿಳಿಸಬಹುದು. ಅದಲ್ಲದೇ aapnocm@gmail.comಗೆ ಇಮೇಲ್ ಮಾಡಿಯೂ ತಮ್ಮ ಆಯ್ಕೆಯನ್ನು ತಿಳಿಸಬಹುದು’ ಎಂದು ಕೇಜ್ರಿವಾಲ್‌ ತಿಳಿಸಿದ್ದಾರೆ. ಈ ಬಗ್ಗೆ ಸುದ್ದಿ ಮಾಧ್ಯಮ ಎನ್‌ಡಿಟಿವಿ ವರದಿ ಮಾಡಿದೆ.

ಪಂಜಾಬ್‌ ಸಿಎಂ ಅಭ್ಯರ್ಥಿ ಆಯ್ಕೆಯ ಸಂದರ್ಭದಲ್ಲೂ ಕೇಜ್ರಿವಾಲ್‌ ಇದೇ ತಂತ್ರ ಪ್ರಯೋಗಿಸಿದ್ದರು.

ಇದನ್ನೂ ಓದಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT