ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

LS Polls: 'ಜೈಲಿಗೆ ಉತ್ತರ ಮತಗಳಲ್ಲಿ ಕೊಡುತ್ತೇವೆ': ಎಎಪಿ ಪ್ರಚಾರ ಗೀತೆ ಬಿಡುಗಡೆ

Published 25 ಏಪ್ರಿಲ್ 2024, 13:18 IST
Last Updated 25 ಏಪ್ರಿಲ್ 2024, 13:18 IST
ಅಕ್ಷರ ಗಾತ್ರ

ನವದೆಹಲಿ: 2024ರ ಲೋಕಸಭಾ ಚುನಾವಣೆಗೆ ಆಮ್ ಆದ್ಮಿ ಪಕ್ಷ (ಎಎಪಿ) ಗುರುವಾರ ತನ್ನ ಪ್ರಚಾರ ಗೀತೆಯನ್ನು ಬಿಡುಗಡೆ ಮಾಡಿದೆ.

ಎಎಪಿ ಶಾಸಕ ದಿಲೀಪ್ ಪಾಂಡೆ ಬರೆದು ಹಾಡಿರುವ ' ಜೈಲ್ ಕೆ ಜವಾಬ್ ಮೇ ಹಮ್ ವೋಟ್ ದೇಂಗೆ' (ಜೈಲಿಗೆ ಉತ್ತರ ಮತಗಳಲ್ಲಿ ನೀಡುತ್ತೇವೆ) ಗೀತೆಯನ್ನು ಎಎಪಿ ಪ್ರಧಾನ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಕ್ಷದ ಮುಖಂಡರು ಬಿಡುಗಡೆ ಮಾಡಿದರು. ಹಾಡಿಕೆ 'Jail Ka Jawab Vote Se' ಎಂಬ ಶೀರ್ಷಿಕೆ ನೀಡಲಾಗಿದೆ.

'ನಮ್ಮ ಪ್ರಚಾರ ಗೀತೆಗಳು ಯಾವಾಗಲೂ ಸಾಮಾನ್ಯ ಜನರ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತವೆ. ಈ ಹಾಡು ಜನರ ಭಾವನೆಯನ್ನು ಪ್ರತಿಬಿಂಬಿಸುತ್ತದೆ. ಹಾಡಿನ ಸಾಹಿತ್ಯವು ಇಂದಿನ ದಿನಗಳಲ್ಲಿ ಏನಾಗುತ್ತಿದೆ ಎಂಬುದರ ನೈಜತೆಯನ್ನು ಬಿಂಬಿಸುತ್ತದೆ' ಎಂದು ಪಾಂಡೆ ಹೇಳಿದ್ದಾರೆ.

ಅಲ್ಲದೇ ಭವಿಷ್ಯದಲ್ಲಿ ಜನರು ಎದುರಿಸಬಹುದಾದ ಅಪಾಯಗಳನ್ನು ಈ ಹಾಡು ಚಿತ್ರಿಸುತ್ತದೆ ಎಂದು ಅವರು ಹೇಳಿದ್ದಾರೆ.

ದೆಹಲಿ ಅಬಕಾರಿ ನೀತಿ ಹಗರಣ ಸಂಬಂಧ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮಾರ್ಚ್ 21 ರಂದು ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿತ್ತು. ಪ್ರಸ್ತುತ ಅವರು ತಿಹಾರ್ ಜೈಲಿನಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT