ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸಿಸೋಡಿಯಾ ನ್ಯಾಯಾಂಗ ಬಂಧನ ಅವಧಿ ಮೇ 21ರವರೆಗೆ ವಿಸ್ತರಣೆ

Published 8 ಮೇ 2024, 14:19 IST
Last Updated 8 ಮೇ 2024, 14:19 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿಯ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ದೆಹಲಿಯ ಉಪ ಮುಖ್ಯಮಂತ್ರಿ ಹಾಗೂ ಎಎಪಿ ನಾಯಕ ಮನಿಶ್‌ ಸಿಸೋಡಿಯಾ ಅವರ ನ್ಯಾಯಾಂಗ ಬಂಧನ ಅವಧಿಯನ್ನು ದೆಹಲಿ ಹೈಕೋರ್ಟ್‌ ಮೇ 21ರವರೆಗೆ ವಿಸ್ತರಿಸಿದೆ. 

ಸಿಸೋಡಿಯಾ ಅವರ ನ್ಯಾಯಾಂಗ ಬಂಧನ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ವಿಚಾರಣೆ ನಡೆಯಿತು. ಸಿಸೋಡಿಯಾ ಅವರು ವಿಡಿಯೊ ಕಾನ್ಫರೆನ್ಸ್‌ ಮೂಲಕ ವಿಚಾರಣೆಗೆ ಹಾಜರಾದರು. ಈ ವೇಳೆ ನ್ಯಾಯಾಧೀಶರಾದ ಕಾವೇರಿ ಬವೇಜಾ, ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಿ ಆದೇಶ ಹೊರಡಿಸಿದರು. 

ಅಬಕಾರಿ ನೀತಿ ಹಗರಣದ ಆರೋಪದಡಿ ಸಿಸೋಡಿಯಾ ಅವರನ್ನು ಕಳೆದ ವರ್ಷ ಮಾರ್ಚ್‌ 9ರಂದು ಜಾರಿ ನಿರ್ದೇಶನಾಲಯ(ಇ.ಡಿ)  ಬಂಧಿಸಿತ್ತು. ಬಳಿಕ ಇದೇ ಪ್ರಕರಣದ ತನಿಖೆಯ ಭಾಗವಾಗಿ ಸಿಬಿಐ ಅವರನ್ನು ಬಂಧಿಸಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT