ಇಕೋಲಾಹ ಗ್ರಾಮದವರಾದ ತರ್ಲೋಚನ್ ಸಿಂಗ್ (60) ತಮ್ಮ ಜಮೀನಿನಿಂದ ಮನೆಗೆ ಮರಳುತ್ತಿದ್ದಾಗ ದಾಳಿ ನಡೆದಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದರು ಎಂದು ಪೊಲೀಸರು ಹೇಳಿದ್ದಾರೆ.
ಸಿಂಗ್ ಅವರು ಖನ್ನಾದಲ್ಲಿ ಎಎಪಿಯ ಕಿಸಾನ್ ವಿಭಾಗದ ಅಧ್ಯಕ್ಷರಾಗಿದ್ದರು.
ಆರೋಪಿಗಳ ಪತ್ತೆಗೆ ಪ್ರಯತ್ನ ಮುಂದುವರಿದಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.