ಭಾನುವಾರ, 21 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಜ್ರಿವಾಲ್ ಬಂಧನ: ಮುಂದಿನ ತಂತ್ರದ ಬಗ್ಗೆ ಚರ್ಚಿಸಲು ಎಎಪಿ ನಾಯಕರ ಸಭೆ

Published 24 ಮಾರ್ಚ್ 2024, 7:02 IST
Last Updated 24 ಮಾರ್ಚ್ 2024, 7:02 IST
ಅಕ್ಷರ ಗಾತ್ರ

ನವದೆಹಲಿ: ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದ್ದರಿಂದ ಭವಿಷ್ಯದ ತಂತ್ರಗಾರಿಕೆ ಬಗ್ಗೆ ಚರ್ಚಿಸಲು ಆಮ್ ಆದ್ಮಿ ಪಕ್ಷದ ನಾಯಕರು, ಶಾಸಕರು ಹಾಗೂ ಕೌನ್ಸಿಲರ್‌ಗಳು ಭಾನುವಾರ ಸಭೆ ಸೇರಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ರಾಜ್ಯಸಭಾ ಸಂಸದ ಸಂದೀಪ್ ಪಾಠಕ್ ಅವರು ಸಭೆಯ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.

‘ಪಕ್ಷದ ಮುಖ್ಯಸ್ಥರ ಬಂಧನವಾದ ಬಳಿಕ ಪಕ್ಷದ ಮೊದಲ ದೊಡ್ಡ ಸಭೆ ಇದೆ. ಪಕ್ಷದ ಭವಿಷ್ಯದ ತಂತ್ರಗಾರಿಕೆಗಳ ಬಗ್ಗೆ ಚರ್ಚಿಸಲಾಗುವುದು’ ಎಂದು ಮೂಲವೊಂದು ತಿಳಿಸಿದೆ.

ದೆಹಲಿ ಅಬಕಾರಿ ಹಗರಣದಲ್ಲಿ ನಂಟಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಅರವಿಂದ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ ಮಾ. 21ರಂದು ಬಂಧಿಸಿತ್ತು. ಸದ್ಯ ಅವರು ಇ.ಡಿ ವಶದಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT