ನವದೆಹಲಿ: ಕೌಟುಂಬಿಕ ದೌರ್ಜನ್ಯ ಆರೋಪದ ಮೇಲೆ ಆಪ್ ಶಾಸಕ ಸೋಮನಾಥ್ ಭಾರ್ತಿ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ಅನ್ನು ದೆಹಲಿ ಹೈಕೋರ್ಟ್ ಮಂಗಳವಾರ ವಜಾ ಮಾಡಿದೆ.

‘ಭಾರ್ತಿ ಹಾಗೂ ಪತ್ನಿ ಲಿಪಿಕಾ ಮಿತ್ರಾ ಸಂತೋಷದಿಂದ ಸಹಬಾಳ್ವೆ ನಡೆಸುತ್ತಿದ್ದಾರೆ. ಪತಿ ವಿರುದ್ಧದ ಎಫ್‌ಐಆರ್ ವಜಾಗೊಳಿಸಲು ತನ್ನ ಆಕ್ಷೇಪ ಇಲ್ಲ ಎಂದಿರುವ ಲಿಪಿಕಾ ಅವರ ಹೇಳಿಕೆ ಪರಿಗಣಿಸಿ ಭಾರ್ತಿ ವಿರುದ್ಧದ ಕ್ರಿಮಿನಲ್ ಪ್ರಕರಣವನ್ನು ವಜಾ ಮಾಡಲಾಗುತ್ತಿದೆ’ ಎಂದು ನ್ಯಾಯಮೂರ್ತಿ ಚಂದ್ರಶೇಖರ್ ಹೇಳಿದರು.

ಅವರಿಬ್ಬರ ನಡುವಿನ ವೈವಾಹಿಕ ವಿವಾದವನ್ನು ಇತ್ಯರ್ಥಗೊಳಿಸುವ ಸಲುವಾಗಿ, ಈ ಪ್ರಕರಣದಲ್ಲಿ ಭಾರ್ತಿಗೆ ನೀಡಲಾಗಿದ್ದ ಜಾಮೀನನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹಿಂಪಡೆಯಲು ಪತ್ನಿ ಲಿಪಿಕಾಗೆ ಹೈಕೋರ್ಟ್ ಅನುಮತಿ ನೀಡಿತ್ತು.

‘ಹಿಂಸೆ ನೀಡುವ ಜೊತೆಗೆ ನನ್ನನ್ನು ಕೊಲೆ ಮಾಡಲು ಯತ್ನಿಸುತ್ತಿದ್ದಾರೆ’ ಎಂದು ಆರೋಪಿಸಿ ಲಿಪಿಕಾ 2015ರ ಜೂನ್ 10ರಂದು ಪತಿ ವಿರುದ್ಧ ದೆಹಲಿಯ ಮಹಿಳಾ ಆಯೋಗಕ್ಕೆ ದೂರು ನೀಡಿದ್ದರು. 2015ರ ಸೆಪ್ಟೆಂಬರ್‌ನಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.