ಭಾನುವಾರ, 13 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ದೆಹಲಿ: MCD ಸ್ಥಾಯಿ ಸಮಿತಿ ಚುನಾವಣೆ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಎಎಪಿ ಅರ್ಜಿ

Published : 29 ಸೆಪ್ಟೆಂಬರ್ 2024, 6:20 IST
Last Updated : 29 ಸೆಪ್ಟೆಂಬರ್ 2024, 6:20 IST
ಫಾಲೋ ಮಾಡಿ
Comments

ನವದೆಹಲಿ: ದೆಹಲಿ ಮಹಾನಗರ ಪಾಲಿಕೆಯ (ಎಂಸಿಡಿ) ಸ್ಥಾಯಿ ಸಮಿತಿಯ ಒಂದು ಸ್ಥಾನಕ್ಕೆ ನಡೆದ ಚುನಾವಣೆಯನ್ನು ಪ್ರಶ್ನಿಸಿ ಆಮ್ ಆದ್ಮಿ ಪಕ್ಷ (ಎಎಪಿ) ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.

ಸಮಿತಿ ಸದಸ್ಯರಾಗಿದ್ದ ಬಿಜೆಪಿ ನಾಯಕ ಕಮಲ್‌ಜೀತ್‌ ಸೆಹ್ರಾವತ್‌ ಅವರು ದೆಹಲಿ ಪಶ್ಚಿಮ ಕ್ಷೇತ್ರದ ಸಂಸದರಾಗಿ ಆಯ್ಕೆಯಾದ ಬಳಿಕ ತೆರವಾಗಿದ್ದ ಸ್ಥಾನಕ್ಕೆ ಚುನಾವಣೆ ನಡೆಸಲು ಲೆಫ್ಟಿನೆಂಟ್‌ ಗವರ್ನರ್‌ ವಿ.ಕೆ. ಸಕ್ಸೇನಾ ಆದೇಶಿಸಿದ್ದರು. ಆದರೆ ಶುಕ್ರವಾರದಂದು ನಡೆದ ಚುನಾವಣೆಯಲ್ಲಿ ಆಡಳಿತರೂಢ ಎಎಪಿಯ ಕೌನ್ಸಿಲರ್‌ಗಳು ಮತದಾನದಿಂದ ದೂರವುಳಿದಿದ್ದರು. ಪರಿಣಾಮ ಎಂಸಿಡಿ 18 ​​ಸದಸ್ಯರ ಸ್ಥಾಯಿ ಸಮಿತಿಯಲ್ಲಿ ತೆರವಾದ ಸ್ಥಾನವನ್ನು ಬಿಜೆಪಿ ಅವಿರೋಧವಾಗಿ ಗೆದ್ದುಕೊಂಡಿತು.

‘ಬಿಜೆಪಿ ಪ್ರಜಾಫ್ರಭುತ್ವವನ್ನು ಕೊಲೆ ಮಾಡುತ್ತಿದೆ, ಈ ಚುನಾವಣೆ ಅಕ್ರಮ ಮತ್ತು ಅಸಂವಿಧಾನಿಕ’ ಎಂದು ದೆಹಲಿ ಮುಖ್ಯಮಂತ್ರಿ ಆತಿಶಿ ಆರೋಪಿಸಿದ್ದರು. ಇದರ ಬೆನ್ನಲ್ಲೇ ಚುನಾವಣೆ ಪ್ರಶ್ನಿಸಿ ಪಕ್ಷ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT