ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ ಅಬಕಾರಿ ನೀತಿ ಹಗರಣ: ಎಎಪಿ ಸಂಸದ ಸಂಜಯ್ ಸಿಂಗ್ ಆಪ್ತರ ಮೇಲೆ ಇ.ಡಿ ದಾಳಿ

Published 24 ಮೇ 2023, 5:52 IST
Last Updated 24 ಮೇ 2023, 5:52 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಪಿ ಸಂಸದ ಸಂಜಯ್ ಸಿಂಗ್‌ ಆಪ್ತರು ಸೇರಿದಂತೆ ಹಲವೆಡೆ ಜಾರಿ ನಿರ್ದೆಶನಾಲಯದ(ಇ.ಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಈ ಬಗ್ಗೆ ಟ್ವಿಟರ್‌ನಲ್ಲಿ ಸಿಂಗ್ ವಿಡಿಯೊ ಸಂದೇಶವನ್ನು ಬಿಡುಗಡೆ ಮಾಡಿದ್ದು, ತನ್ನ ಇಬ್ಬರು ಸಹಚರರ ಮೇಲೂ ದಾಳಿ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿಯಲ್ಲಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.

ಮದ್ಯದ ವ್ಯಾಪಾರಿಗಳಿಗೆ ಪರವಾನಗಿ ನೀಡಲು ದೆಹಲಿ ಸರ್ಕಾರದ 2021-22ರ ಅಬಕಾರಿ ನೀತಿಯು ಕಾರ್ಟೆಲೈಸೇಶನ್‌ಗೆ ಅವಕಾಶ ಮಾಡಿಕೊಟ್ಟಿತು. ಲಂಚ ನೀಡಿದ ಕೆಲವು ಡೀಲರ್‌ಗಳಿಗೆ ಸಹಾಯ ಮಾಡಲಾಗಿದೆ. ಎಂದು ಇ.ಡಿ ಮತ್ತು ಸಿಬಿಥ ಆರೋಪಿಸಿವೆ. ಇದನ್ನು ಎಎಪಿ ಬಲವಾಗಿ ನಿರಾಕರಿಸಿದೆ.

ಈ ಸಂಬಂಧ ಬಂಧನಕ್ಕೀಡಾಗಿರುವ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಜೈಲಿನಲ್ಲಿದ್ದಾರೆ.

ಹಗರಣದ ಆರೋಪ ಬರುತ್ತಿದ್ದಂತೆ ಅಬಕಾರಿ ನೀತಿಯನ್ನು ಹಿಂಪಡೆಲಾಗಿತ್ತು. ಬಳಿಕ, ದೆಹಲಿ ಲೆಫ್ಟಿನೆಂಟ್ ಗವರ್ನರ್ ಪ್ರಕರಣದ ಸಿಬಿಐ ತನಿಖೆಗೆ ಶಿಫಾರಸು ಮಾಡಿದ್ದರು, ನಂತರ ಇ.ಡಿ ಪಿಎಂಎಲ್‌ಎ ಅಡಿ ಪ್ರಕರಣವನ್ನು ದಾಖಲಿಸಿಕೊಂಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT