ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಗ್ರೀವಾಜ್ಞೆ: ಎಎಪಿಯಿಂದ ‘ಮಹಾ ರ್‍ಯಾಲಿ’

Published 22 ಮೇ 2023, 14:08 IST
Last Updated 22 ಮೇ 2023, 14:08 IST
ಅಕ್ಷರ ಗಾತ್ರ

ನವದೆಹಲಿ: ‘ಸುಪ್ರೀಂ ಕೋರ್ಟ್‌ ತೀರ್ಪನ್ನೂ ನಿರ್ಲಕ್ಷಿಸಿ ಲೆಫ್ಟಿನೆಂಟ್‌ ಗವರ್ನರ್‌ಗೆ ಆಡಳಿತಾತ್ಮಕ ಸೇವೆಗಳ ನಿಯಂತ್ರಣವನ್ನು ನೀಡುವ ಸಂಬಂಧ ಕೇಂದ್ರ ಸರ್ಕಾರವು ‘ಕರಾಳ ಸುಗ್ರೀವಾಜ್ಞೆ’ಯನ್ನು ಹೊರಡಿಸಿದೆ’ ಎಂದು ಆಮ್‌ ಆದ್ಮಿ ಪಕ್ಷ ಸೋಮವಾರ ಆರೋಪಿಸಿದೆ.

ಈ ಸುಗ್ರೀವಾಜ್ಞೆಯನ್ನು ವಿರೋಧಿಸಲು ಜೂನ್‌ 11ರಂದು ರಾಮಲೀಲಾ ಮೈದಾನದಲ್ಲಿ ‘ಮಹಾ ರ್‍ಯಾಲಿ’ ಆಯೋಜಿಸುವುದಾಗಿ ಪಕ್ಷ ಹೇಳಿದೆ.

‘ಕೇಂದ್ರ ಸರ್ಕಾರವು ಇಂಥ ಸುಗ್ರೀವಾಜ್ಞೆಯ ಮೂಲಕ ದೇಶದಲ್ಲಿ ‘ಸರ್ವಾಧಿಕಾರಿ ನಿರ್ಧಾರಗಳನ್ನು’ ಹೇರಲು ಹೊರಟಿದೆ. ಆದ್ದರಿಂದ ಜನರು ಈ ರ್‍ಯಾಲಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು’ ಎಂದು ಪಕ್ಷದ ದೆಹಲಿ ಸಂಚಾಲಕ ಗೋಪಾಲ್‌ ರೈ ಅವರು ಮಾಧ್ಯಮಗೋಷ್ಠಿಯಲ್ಲಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT