ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹರಿಯಾಣದ ಎಲ್ಲಾ ವಿಧಾನಸಭಾ ಸ್ಥಾನಗಳಲ್ಲಿ ಎಎಪಿ ಸ್ಪರ್ಧಿಸಲಿದೆ: ಕೇಜ್ರಿವಾಲ್

Published 28 ಜನವರಿ 2024, 13:04 IST
Last Updated 28 ಜನವರಿ 2024, 13:04 IST
ಅಕ್ಷರ ಗಾತ್ರ

ಚಂಡೀಗಢ: ಲೋಕಸಭೆ ಚುನಾವಣೆಯನ್ನು ಇಂಡಿಯಾ ಬಣದ ಭಾಗವಾಗಿ ಎದುರಿಸಲಾಗುವುದು. ಆದರೆ ಹರಿಯಾಣದ ಎಲ್ಲಾ 90 ವಿಧಾನಸಭಾ ಸ್ಥಾನಗಳಲ್ಲಿ ತಮ್ಮ ಪಕ್ಷ (ಎಎಪಿ) ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ ಎಂದು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಹೇಳಿದರು.

ಹರಿಯಾಣದ ಜಿಂದ್‌ನಲ್ಲಿ ಪಕ್ಷದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಇಂದು ಜನರು ಆಮ್ ಆದ್ಮಿ ಪಕ್ಷದ ಮೇಲೆ ಮಾತ್ರ ವಿಶ್ವಾಸ ಹೊಂದಿದ್ದಾರೆ. ಪಂಜಾಬ್ ಮತ್ತು ದೆಹಲಿಯಲ್ಲಿ ಜನರು ನಮ್ಮ ಸರ್ಕಾರವನ್ನು ನೋಡುತ್ತಿದ್ದಾರೆ. ಉತ್ತಮ ಆಡಳಿತದಿಂದ ಅಲ್ಲಿನ ಜನರು ಸಂತೋಷವಾಗಿದ್ದಾರೆ. ಈಗ ಹರಿಯಾಣ ದೊಡ್ಡ ಬದಲಾವಣೆಯನ್ನು ಬಯಸುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್ ಕೂಡ ಉಪಸ್ಥಿತರಿದ್ದರು.

ಏಪ್ರಿಲ್-ಮೇ ತಿಂಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಕೆಲವು ತಿಂಗಳ ನಂತರ ಅಂದರೆ ಈ ವರ್ಷದ ಕೊನೆಯಲ್ಲಿ ವಿಧಾನಸಭಾ ಚುನಾವಣೆಗಳು ನಡೆಯುವ ಸಾಧ್ಯತೆಯಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT