ನವದೆಹಲಿ: ‘ಪಕ್ಷದ ಇನ್ಸ್ಟಾಗ್ರಾಂ ಜೊತೆಗೆ ನನ್ನ ವೈಯಕ್ತಿಕ ಇನ್ಸ್ಟಾಗ್ರಾಂ ಪೇಜ್ ಅನ್ನು ಹ್ಯಾಕ್ ಮಾಡಲಾಗಿದೆ. ಪಕ್ಷದ ಎಕ್ಸ್ ಖಾತೆಯನ್ನು ತಡೆಹಿಡಿಯಲಾಗಿದೆ. ವೆಬ್ಸೈಟ್ಗೆ ಪ್ರವೇಶಿಸಲು ಆಗುತ್ತಿಲ್ಲ’ ಎಂದು ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸ್ಥಾಪಕ ಅಭಿಜೀತ್ ದಿಪ್ಕೆ ಹೇಳಿದ್ದಾರೆ.

ಶನಿವಾರ ಎಕ್ಸ್ನಲ್ಲಿ ಮಾಡಿದ ಪೋಸ್ಟ್ನಲ್ಲಿ ದಿಪ್ಕೆ ಅವರು, ಶಿಕ್ಷಣ ಸಚಿವರ ವಿರುದ್ಧ ಪ್ರತಿಭಟನೆಗೆ ಕರೆ ನೀಡಿದ ಬೆನ್ನಲ್ಲೇ ಸಿಜೆಪಿ ವಿರುದ್ಧ ದಮನಕಾರಿ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಸಿಜೆಪಿ ಶುಕ್ರವಾರ ಅಭಿಯಾನವನ್ನು ಪ್ರಾರಂಭಿಸಿತ್ತು. ಅದೇ ದಿನ ತಮಗೆ ಕೊಲೆ ಬೆದರಿಕೆಗಳು ಬರುತ್ತಿವೆ ಎಂದು ದಿಪ್ಕೆ ಹೇಳಿದ್ದರು. ಅಲ್ಲದೇ ಬೆದರಿಕೆ ಸಂದೇಶಗಳ ಸ್ಕ್ರೀನ್ಶಾಟ್ಗಳನ್ನು ಹಂಚಿಕೊಂಡಿದ್ದರು.

‘ಸದ್ಯ ನಮ್ಮ ಯಾವುದೇ ಸಾಮಾಜಿಕ ಜಾಲತಾಣದ ವೇದಿಕೆಗೆ ಪ್ರವೇಶಿಸಲು ನಮಗೆ ಆಗುತ್ತಿಲ್ಲ .ಇದರ ನಂತರ ಪ್ರಕಟಿಸಲಾಗುವ ಯಾವುದೇ ಪೋಸ್ಟ್ ಅನ್ನು ಕಾಕ್ರೋಚ್ ಜನತಾ ಪಾರ್ಟಿಯ ಅಧಿಕೃತ ಹೇಳಿಕೆ ಎಂದು ಪರಿಗಣಿಸಬಾರದು’ ಎಂದು ಅವರು ಪೋಸ್ಟ್ನಲ್ಲಿ ತಿಳಿಸಿದ್ದಾರೆ.

‘ಸಿಜೆಪಿ ವೆಬ್ಸೈಟ್ cockroachjantaparty.org ಅನ್ನು ಸಹ ತೆಗೆದುಹಾಕಲಾಗಿದ್ದು, ಅದು ಈಗ ಲಭ್ಯವಿಲ್ಲ’ ಎಂದಿದ್ದಾರೆ.

‘ಪ್ರಶ್ನೆಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಶಿಕ್ಷಣ ಸಚಿವರ ವಿರುದ್ಧ ಕ್ರಮ ಕೈಗೊಳ್ಳಬೇಕಾಗಿತ್ತು. ಸರ್ಕಾರದ ವೈಫಲ್ಯದಿಂದಾಗಿ ಪ್ರಾಣ ಕಳೆದುಕೊಂಡ ವಿದ್ಯಾರ್ಥಿಯ ಪರವಾಗಿ ಕ್ರಮ ಕೈಗೊಳ್ಳಬೇಕಿತ್ತು. ಆದರೆ, ನವ ಭಾರತದಲ್ಲಿ, ಹೊಣೆಗಾರಿಕೆಯನ್ನು ಕೇಳಿದ್ದಕ್ಕಾಗಿ ಕಾಕ್ರೋಚ್ ಜನತಾ ಪಾರ್ಟಿಯ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದು ಅವರು ಹೇಳಿದ್ದಾರೆ.

‘ಪ್ರತಿಭಟನೆಯಿಂದ ಸಿಜೆಪಿ ಹಿಂದೆ ಸರಿದಿದೆ ಎಂಬ ಸಂದೇಶಗಳನ್ನು ಹರಿಬಿಡಲಾಗುತ್ತಿದೆ. ಇದು ಸುಳ್ಳು. ಇಡೀ ಚಳವಳಿಯನ್ನು ದುಷ್ಟತನದಿಂದ ಬಿಂಬಿಸಲು ಪ್ರಯತ್ನಿಸಲಾಗುತ್ತಿದೆ. ಎಲ್ಲಾ ಕಾಕ್ರೋಚ್ಗಳು ಶಾಂತಿಯುತವಾಗಿ ಮತ್ತು ಜಾಗರೂಕರಾಗಿರಲು ನಾವು ವಿನಂತಿಸುತ್ತೇವೆ’ ಎಂದು ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.