ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್‌ಘಾಟ್‌: ಕೇಂದ್ರದ ವಿರುದ್ಧ ಟಿಎಂಸಿ ಧರಣಿ, ಮನರೇಗಾ ಅನುದಾನ ಬಿಡುಗಡೆಗೆ ಆಗ್ರಹ

Published 2 ಅಕ್ಟೋಬರ್ 2023, 14:11 IST
Last Updated 2 ಅಕ್ಟೋಬರ್ 2023, 14:11 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರ ಸರ್ಕಾರವು ಪಶ್ಚಿಮ ಬಂಗಾಳಕ್ಕೆ ಅನುದಾನ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಟಿಎಂಸಿ ನಾಯಕ ಅಭಿಷೇಕ್‌ ಬ್ಯಾನರ್ಜಿ ಮತ್ತು ಪಕ್ಷದ ಕಾರ್ಯಕರ್ತರು ರಾಜ್‌ಘಾಟ್‌ನಲ್ಲಿ ಸೋಮವಾರ ಧರಣಿ ನಡೆಸಿದರು.

ಪಕ್ಷದ ಶಾಸಕರು, ಸಂಸದರು ಸೇರಿದಂತೆ ನೂರಾರು ಮಂದಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಇದೇ ಸಂದರ್ಭದಲ್ಲಿ ಮಹಾತ್ಮ ಗಾಂಧಿ ಜಯಂತಿ ಅಂಗವಾಗಿ ಅವರ ಸ್ಮಾರಕಕ್ಕೆ ನಮನ ಸಲ್ಲಿಸಿದರು.

ಅಭಿಷೇಕ್‌ ಬ್ಯಾನರ್ಜಿ ‘ಬಂಗಾಳಕ್ಕೆ ಅನುದಾನ ಬಿಡುಗಡೆ ಮಾಡಿ’ ಎಂಬ ಫಲಕಗಳನ್ನು ಹಿಡಿದಿದ್ದರು.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ (ಮನರೇಗಾ) ರಾಜ್ಯಕ್ಕೆ ನೀಡಬೇಕಾದ ₹15,000 ಕೋಟಿಯನ್ನು ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಬಿಡುಗಡೆ ಮಾಡಿಲ್ಲ ಎಂದು ಟಿಎಂಸಿ ಆರೋಪಿಸಿದೆ.

ಪಕ್ಷದ ವಕ್ತಾರ ವಿಶ್ವಜಿತ್‌ ದೇವ್‌ ಅವರು, ‘ಗ್ರಾಮೀಣ ಭಾಗದಲ್ಲಿ ಉದ್ಯೋಗ ಒದಗಿಸುವ ಮನರೇಗಾ ಯೋಜನೆಯನ್ನು ಕೇಂದ್ರ ಸರ್ಕಾರ ಹಾಳು ಮಾಡುತ್ತಿದೆ. ಇದು ಮಹಾತ್ಮ ಗಾಂಧಿ ಅವರಿಗೆ ಮಾಡುವ ಅವಮಾನ. ಇದು ಪ್ರಜಾಪ್ರಭುತ್ವವೇ, ಕೇಂದ್ರ ಸರ್ಕಾರವು ಯೋಜನೆಯನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿದೆ’ ಎಂದು ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT