ಕೋಲ್ಕತ್ತ, ಪಶ್ಚಿಮ ಬಂಗಾಳ: ‘ಬಿಜೆಪಿಯು ಹೆಣದ ಮೇಲೆ ರಾಜಕೀಯ ಮಾಡುತ್ತಿದೆ’ ಎಂದು ತೃಣಮೂಲ ಕಾಂಗ್ರೆಸ್ನ ನಾಯಕ ಅಭಿಷೇಕ್ ಬ್ಯಾನರ್ಜಿ ಆರೋಪಿಸಿದ್ದಾರೆ.

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಪ್ರಯುಕ್ತ ಪುರುಲಿಯಾ ಜಿಲ್ಲೆಯ ಬಲರಾಂ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಸಂತಿರಾಮ್ ಮಹತೊ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಸೋಮವಾರ ಭಾಗವಹಿಸಿ ಅವರು ಮಾತನಾಡಿದರು.

‘2018ರಲ್ಲಿ ಬಿಜೆಪಿಯ ಇಬ್ಬರು ಕಾರ್ಯಕರ್ತರು ಅಸ್ವಾಭಾವಿಕವಾಗಿ ಮೃತಪಟ್ಟಿದ್ದರು. ಈ ಸಾವಿಗೆ ಟಿಎಂಸಿ ಪಕ್ಷವೇ ಕಾರಣ ಎಂದು ಆರೋಪಿಸಲಾಗಿತ್ತು. ಬಿಜೆಪಿಯ ಆಗಿನ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕೂಡ ಸಂತ್ರಸ್ತರ ಮನೆಗೆ ಭೇಟಿ ನೀಡಿ, ಕುಟುಂಬದ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡುವ ಭರವಸೆ ನೀಡಿದ್ದರು. ಆದರೆ, ಇದುವರೆಗೂ ಆ ಕುಟುಂಬಕ್ಕೆ ಏನೂ ನೆರವು ನೀಡಿಲ್ಲ’ ಎಂದು ದೂರಿದ್ದಾರೆ.

‘ಪುರುಲಿಯಾದ ಬಿಜೆಪಿ ಸಂಸದ ಜ್ಯೋತಿರ್ಮಯಿ ಸಿಂಗ್ ಮಹತೊ ಹಾಗೂ ಬಿಜೆಪಿ ಅಭ್ಯರ್ಥಿ ಕೂಡ ಈ ಬಗ್ಗೆ ಜನರಿಗೆ ಸ್ಪಷ್ಟನೆ ನೀಡಬೇಕು. ಯಾವ ಕಾರಣಕ್ಕಾಗಿ ಉದ್ಯೋಗ ನೀಡಲು ಸಾಧ್ಯವಾಗಲಿಲ್ಲ ಎಂಬುದನ್ನು ವಿವರಿಸಬೇಕು. ಇಬ್ಬರ ಸಾವನ್ನು ರಾಜಕೀಯವಾಗಿ ಬಳಸಿಕೊಂಡ ಬಳಿಕ ಬಿಜೆಪಿ ನಾಯಕರು ಅವರ ಸಂಪರ್ಕವನ್ನು ಕಡಿದುಕೊಂಡಿದ್ದು ಏಕೆ ಎಂಬುದನ್ನು ತಿಳಿಸಬೇಕು’ ಎಂದು ಒತ್ತಾಯಿಸಿದ್ದಾರೆ.

‘ಈ ಸಾವಿನ ಹಿಂದೆ ಟಿಎಂಸಿಯ ಯಾವುದೇ ಕೈವಾಡವಿಲ್ಲ. ಇದೊಂದು ದುರಂತವಾಗಿದ್ದು, ಬಿಜೆಪಿಯು ಈ ಬೆಳವಣಿಗೆಯನ್ನು ಬಳಸಿಕೊಳ್ಳುವ ಮೂಲಕ ಮೃತರಿಗೆ ಅಗೌರವ ತೋರಿದೆ’ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.