ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಯೋತ್ಪಾದಕ ಚಟುವಟಿಕೆ; ಲಾರೆನ್ಸ್‌ ಬಿಷ್ಣೋಯಿ ಸಹಚರನ ಬಂಧನ

Published 20 ಮೇ 2023, 14:22 IST
Last Updated 20 ಮೇ 2023, 14:22 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿ ಮತ್ತಿತರ ಭಾಗಗಳಲ್ಲಿ ಭಯೋತ್ಪಾದಕ ಚಟುವಟಿಕೆ ನಡೆಸಲು ಯುವ ಜನತೆಯನ್ನು ನೇಮಕ ಮಾಡಿಕೊಂಡ ಪ್ರಕರಣ ಸಂಬಂಧ ಪಾತಕಿ ಲಾರೆನ್ಸ್‌ ಬಿಷ್ಣೋಯಿ ಸಹಚರ ಯಧ್ವೀರ್ ಸಿಂಗ್‌ ಅಲಿಯಾಸ್‌ ‘ಸಧು’ನನ್ನು ಬಂಧಿಸಲಾಗಿದೆ ಎಂದು ಎನ್‌ಐಎ ಶನಿವಾರ ತಿಳಿಸಿದೆ.

ಯಧ್ವೀರ್ ಗಡಿಯಾದ್ಯಂತ ಶಸ್ತ್ರಾಸ್ತ್ರಗಳನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ. ಬಿಷ್ಣೋಯಿ ಮತ್ತಿತರರ ಸೂಚನೆಯ ಮೇರೆಗೆ ಕೊಲೆ, ಸುಲಿಗೆ ಮುಂತಾದ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎನ್ನುವುದು ತನಿಖೆ ವೇಳೆ ಬಹಿರಂಗವಾಗಿದೆ ಎಂದು ವಕ್ತಾರರು ತಿಳಿಸಿದ್ದಾರೆ.

ಭಾರತೀಯ ದಂಡ ಸಂಹಿತೆ ಮತ್ತು ಶಸ್ತ್ರಾಸ್ತ್ರ ಕಾಯ್ದೆ ಮತ್ತು ಕಾನೂನು ಬಾಹಿರ ಚಟುವಟಿಕೆಗಳ(ತಡೆ) ಕಾಯ್ದೆಯ ವಿವಿಧ ಸೆಕ್ಷನ್‌ಗಳಡಿಯಲ್ಲಿ ಪ್ರಕರಣದ 14 ಆರೋಪಿಗಳ ವಿರುದ್ಧ ಮಾ.24ರಂದು ಎನ್‌ಐಎ ಆರೋಪ ಪಟ್ಟಿ ದಾಖಲಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT