ನವದೆಹಲಿ: ಬಿಹಾರ ಮತ್ತು ಒಡಿಶಾ ರಾಜ್ಯದಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ 9 ಜನರು ಮೃತಪಟ್ಟು 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಬಿಹಾರದ ಭೋಜ್‌ಪುರ ಜಿಲ್ಲೆಯಲ್ಲಿ ಅರಾ–ಬಕ್ಸರ್ ಹೆದ್ದಾರಿಯಲ್ಲಿ ಜೀಪ್‌ವೊಂದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಜೀಪ್‌ನಲ್ಲಿದ್ದ 5 ಜನರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರು ಒಂದೇ ಕುಟುಂಬದವರು ಎನ್ನಲಾಗಿದೆ.
ಒಡಿಶಾದ ಗಂಜಾಮ್ ಜಿಲ್ಲೆಯಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ಹಾಗೂ ಟ್ಯಾಂಕರ್ ನಡುವೆ ಅಪಘಾತವಾಗಿದ್ದು ನಾಲ್ವರು ಮೃತಪಟ್ಟಿದ್ದಾರೆ.
ಘಟನೆಯಲ್ಲಿ 13 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.