ಕೊಚ್ಚಿ: ಕೇರಳ ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಬೆಂಗಳೂರಿನ ಮಾದಕವಸ್ತು ಪ್ರಕರಣದ ಆರೋಪಿಗಳು ಕೂಡ ನೆರವು ನೀಡಿರುವ ಶಂಕೆ ಇದೆ ಎಂದು ಜಾರಿ ನಿರ್ದೇಶನಾಲಯವು (ಇಡಿ) ತಿಳಿಸಿದೆ. ಈ ಹಿನ್ನೆಲೆಯಲ್ಲಿ ಚಿನ್ನ ಕಳ್ಳ ಸಾಗಣೆ ಪ್ರಕರಣದ ಪ್ರಮುಖ ಮೂವರು ಆರೋಪಿಗಳ ನ್ಯಾಯಾಂಗ ಬಂಧನವನ್ನು ವಿಸ್ತರಿಸುವಂತೆ ಪಿಎಂಎಲ್‌ಎ ಪ್ರಕರಣಗಳ ವಿಶೇಷ ನ್ಯಾಯಾಲಯಕ್ಕೆ ಇಡಿ ಬುಧವಾರ ಮನವಿ ಮಾಡಿದೆ.

ಮಾದಕವಸ್ತು ಪ್ರಕರಣದ ತನಿಖೆ ವೇಳೆಸರಿತ್ ಪಿ.ಎಸ್., ಸ್ವಪ್ನ ಸುರೇಶ್ ಸೇರಿದಂತೆ ಮೂವರು ಆರೋಪಿಗಳಿಗೆ ಚಿನ್ನ ಕಳ್ಳ ಸಾಗಣೆ ಮಾಡಲು ಬೆಂಗಳೂರಿನ ಡ್ರಗ್ಸ್ ಜಾಲದ ಆರೋಪಿಗಳು ಸಹಾಯ ಮಾಡಿದ್ದಾರೆ ಎಂಬುದು ಬೆಳಕಿಗೆ ಬಂದಿದೆ.ಮಾದಕ ವಸ್ತು ಪ್ರಕರಣದ ಎಲ್ಲಾ ಮಾಹಿತಿಯನ್ನು ಒದಗಿಸುವಂತೆ ಬೆಂಗಳೂರಿನ ಮಾದಕವಸ್ತು ನಿಯಂತ್ರಣ ಬ್ಯುರೋಗೆಇಡಿ ಮನವಿ ಮಾಡಿದೆ.

ಈ ಪ್ರಕರಣದಲ್ಲಿ ಸಂಬಂಧವಿದೆ ಎನ್ನಲಾಗುತ್ತಿರುವ ಗಣ್ಯ ವ್ಯಕ್ತಿಗಳಲ್ಲಿ ಒಬ್ಬರ ವಿಚಾರಣೆ ನಡೆಸಲಾಗುತ್ತಿದೆ. ಅಲ್ಲದೇ ಚಿನ್ನ ಕಳ್ಳ ಸಾಗಣೆಯ ಪ್ರಮುಖ 20ಕ್ಕೂ ಹೆಚ್ಚು ಆರೋಪಿಗಳ ವಿಚಾರಣೆ ನಡೆಸಲಾಗುವುದು ಎಂದು ಇಡಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.