ಸಂಭಲ್: ಶಿಕ್ಷಕಿಯೊಬ್ಬರ ಮೇಲೆ ಆ್ಯಸಿಡ್ ಎರಚಿದ ಆರೋಪದಡಿ ವ್ಯಕ್ತಿಯೊಬ್ಬನನ್ನು ಎನ್ಕೌಂಟರ್ ನಡೆಸಿ ಬಂಧಿಸಿದ ಘಟನೆ ಉತ್ತರಪ್ರದೇಶದ ಸಂಭಲ್ನಲ್ಲಿ ನಡೆದಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಆರೋಪಿಯನ್ನು ಅಮ್ರೋಹಾ ಜಿಲ್ಲೆಯ ಟಿಗ್ರಿ ಗ್ರಾಮದ ನಿವಾಸಿ ನಿಶು ತಿವಾರಿ (30) ಎಂದು ಗುರುತಿಸಲಾಗಿದೆ.

ಸೆಪ್ಟೆಂಬರ್ 23ರಂದು ಶಿಕ್ಷಕಿಯೊಬ್ಬರು (22) ಶಾಲೆಯಿಂದ ಮನೆಗೆ ಹಿಂತಿರುಗುತ್ತಿದ್ದಾಗ ನಖಾಸಾ ಪ್ರದೇಶದ ಬಳಿ ಸ್ಕೂಟರ್ನಲ್ಲಿ ಬಂದ ಆರೋಪಿ ಆಕೆಯ ಮುಖಕ್ಕೆ ಆ್ಯಸಿಡ್ ಎರಚಿದ್ದಾನೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಕೃಷ್ಣ ಕುಮಾರ್ ತಿಳಿಸಿದ್ದಾರೆ.
.ಗಮನಿಸಿ: ನವರಾತ್ರಿಯಲ್ಲಿ ಈ ಕೆಲಸಗಳನ್ನು ಮಾಡಬಾರದು ಎನ್ನುತ್ತೆ ಜ್ಯೋತಿಷ.ರಾಯಚೂರಿನಲ್ಲಿ ಭಾರಿ ಮಳೆ: ಜನಜೀವನ ಸಂಪೂರ್ಣ ಸ್ತಬ್ಧ.
ಈ ದಾಳಿಯಲ್ಲಿ ಶಿಕ್ಷಕಿಗೆ ಶೇ 20ರಿಂದ 30ರಷ್ಟು ಸುಟ್ಟ ಗಾಯಗಳಾಗಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಸಂತ್ರಸ್ತೆಯನ್ನು ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಯನ್ನು ಬಂಧಿಸುವ ವೇಳೆ ಆತ್ಮರಕ್ಷಣೆಗಾಗಿ ಪೊಲೀಸರು ಗುಂಡು ಹಾರಿಸಿದರು. ಆರೋಪಿಯಿಂದ ಒಂದು ಪಿಸ್ತೂಲ್, ಎರಡು ಕಾರ್ಟ್ರಿಡ್ಜ್ಗಳು ಮತ್ತು ಸ್ಕೂಟರ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
.ಉಳ್ಳಾಗಡ್ಡಿ ದರ ಕುಸಿತ.. ಲಕ್ಷ್ಮೇಶ್ವರದ ರೈತರು ಕಂಗಾಲು!.ಪರಿಶಿಷ್ಟ ಪಂಗಡದೊಳಗೆ ಅಂತರ ಜಾತಿ ವಿವಾಹಕ್ಕೆ ಆರ್ಥಿಕ ಬೆಂಬಲ.ನವರಾತ್ರಿ 5ನೇ ದಿನ | ಸ್ಕಂದ ಮಾತೆಯ ಪೂಜೆ ಹೀಗಿರಲಿ.ಕಾಂತಾರ ಅಧ್ಯಾಯ–1 ಸಿನಿಮಾಕ್ಕೆ ಇಂದಿನಿಂದ ಮುಂಗಡ ಬುಕಿಂಗ್ ಆರಂಭ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.