ಇಪ್ಪತ್ನಾಲ್ಕು ಗಂಟೆಗಳಲ್ಲಿ 31,382 ಹೊಸ ಕೋವಿಡ್ ಪ್ರಕರಣಗಳು ದೇಶದಲ್ಲಿ ವರದಿಯಾಗಿವೆ. ಈ ಮೂಲಕ ಒಟ್ಟು ಸೋಂಕಿನ ಪ್ರಕರಣಗಳ ಸಂಖ್ಯೆ 3,35,94,803ಕ್ಕೆ ಏರಿಕೆಯಾಗಿದೆ. ಹೊಸದಾಗಿ 318 ಸಾವಿನ ಪ್ರಕರಣಗಳು ವರದಿಯಾಗಿವೆ. ಸಾವಿನ ಒಟ್ಟು ಪ್ರಕರಣಗಳ ಸಂಖ್ಯೆ 4,46,368ಕ್ಕೆ ಏರಿದೆ. ಗುಣಮುಖರಾದವರ ಪ್ರಮಾಣ ಶೇ 97.78ರಷ್ಟಿದೆ ಎಂದು ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.