ಮಂಗಳವಾರ, 18 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮರಾಠ ಸಮುದಾಯದ ಮೀಸಲಾತಿಗೆ ಒತ್ತಾಯ: ಆಮರಣಾಂತ ನಿರಶನ ಆರಂಭಿಸಿದ ಮನೋಜ್ ಜರಾಂಗೆ

Published 8 ಜೂನ್ 2024, 7:35 IST
Last Updated 8 ಜೂನ್ 2024, 7:35 IST
ಅಕ್ಷರ ಗಾತ್ರ

ಛತ್ರಪತಿ ಸಂಭಾಜಿನಗರ: ಮರಾಠ ಸಮುದಾಯದ ಮೀಸಲಾತಿಗೆ ಒತ್ತಾಯಿಸಿ ಮೀಸಲಾತಿ ಹೋರಾಟಗಾರ ಮನೋಜ್ ಜರಾಂಗೆ ಅವರು ಇಂದು (ಶನಿವಾರ) ಆಮರಣಾಂತ ನಿರಶನವನ್ನು ಆರಂಭಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮೀಸಲಾತಿಗೆ ಒತ್ತಾಯಿಸಿ ಆಮರಣಾಂತ ನಿರಶನವನ್ನು ಆರಂಭಿಸಿದ್ದೇನೆ. ಆದರೆ, ಉಪವಾಸ ಸತ್ಯಾಗ್ರಹಕ್ಕೆ ಪೊಲೀಸರು ಅನುಮತಿ ನೀಡಿಲ್ಲ’ ಎಂದು ತಿಳಿಸಿದ್ದಾರೆ.

ಈ ಬಾರಿ ಮರಾಠ ಸಮುದಾಯಕ್ಕೆ ಮೀಸಲಾತಿ ನೀಡಲು ಮಹಾರಾಷ್ಟ್ರ ಸರ್ಕಾರ ವಿಫಲವಾದರೆ, ಮುಂಬರುವ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದು ಖಚಿತ ಎಂದು ಹೇಳಿದ್ದಾರೆ.

ಮಹಾ ವಿಕಾಸ ಅಘಾಡಿ ಸರ್ಕಾರ ನಮಗೆ ಮೀಸಲಾತಿ ನೀಡಲಿಲ್ಲ. ಮುಖ್ಯಮಂತ್ರಿ ಏಕನಾಥ ಶಿಂದೆ ಅವರ ಸರ್ಕಾರವೂ ಸಮುದಾಯಕ್ಕೆ ದ್ರೋಹ ಮಾಡಿದೆ. ಎಲ್ಲಾ ಪಕ್ಷಗಳು ಕಳೆದ 40 ವರ್ಷಗಳಿಂದ ಮರಾಠ ಸಮುದಾಯವನ್ನು ಬಳಸಿಕೊಂಡಿವೆ ಎಂದು ಆರೋಪಿಸಿದ್ದಾರೆ.

ಕಳೆದ ವರ್ಷ ಆಗಸ್ಟ್‌– ಸೆಪ್ಟೆಂಬರ್‌ ಹಾಗೂ ಅಕ್ಟೋಬರ್‌– ನವೆಂಬರ್‌ನಲ್ಲಿ ಜಾರಂಗೆ ಅವರು ಮರಾಠ ಮೀಸಲಾತಿ ನೀಡುವಂತೆ ಒತ್ತಾಯಿಸಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದರು. ಸರ್ಕಾರ ಮೀಸಲಾತಿ ನೀಡುವ ಭರವಸೆ ನೀಡಿದ ಬಳಿಕ ಸತ್ಯಾಗ್ರಹವನ್ನು ಕೈಬಿಟ್ಟಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT