ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಮಿಳಗ ವೆಟ್ರಿ ಕಳಗಂ: ದಳಪತಿ ವಿಜಯ್‌ ಹೊಸ ರಾಜಕೀಯ ಪಕ್ಷ

Published 2 ಫೆಬ್ರುವರಿ 2024, 9:10 IST
Last Updated 2 ಫೆಬ್ರುವರಿ 2024, 9:10 IST
ಅಕ್ಷರ ಗಾತ್ರ

ಚೆನ್ನೈ: ಹೊಸ ರಾಜಕೀಯ ಪಕ್ಷ ಸ್ಥಾಪಿಸಿವುದಾಗಿ ತಮಿಳು ನಟ ವಿಜಯ್‌ (ದಳಪತಿ ವಿಜಯ್) ಶುಕ್ರವಾರ ಘೋಷಿಸಿದ್ದಾರೆ. ತಮ್ಮ ಪಕ್ಷಕ್ಕೆ ‘ತಮಿಳಗ ವೆಟ್ರಿ ಕಳಗಂ’ (Tamizhaga Vetri Kazhagam) ಎಂದು ನಾಮಕರಣ ಮಾಡಿದ್ದು, 2026ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಿದ್ದಾರೆ.

‘ತಮಿಳಗ ವೆಟ್ರಿ ಕಳಗಂ’ ಎಂದರೆ ‘ತಮಿಳುನಾಡು ವಿಜಯ ಪಕ್ಷ’ (Tamil Nadu Victory Party) ಎಂದರ್ಥ.

ರಾಜಕೀಯವು ಮತ್ತೊಂದು ಮನರಂಜನಾ ತಾಣವಲ್ಲ, ಪವಿತ್ರ ಸಾಮಾಜಿಕ ಸೇವೆ ಎಂದಿದ್ದಾರೆ.

‘ತಮ್ಮ ಪಕ್ಷವು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ. ಜತೆಗೆ ಯಾವ ಪಕ್ಷವನ್ನೂ ಬೆಂಬಲಿಸುತ್ತಿಲ್ಲ. ಈಗಾಗಲೇ ಒಪ್ಪಿಕೊಂಡಿರುವ ಸಿನಿಮಾಗಳ ಕೆಲಸವನ್ನು ಮುಗಿಸಿದ ಬಳಿಕ, ಸಂಪೂರ್ಣವಾಗಿ ಪಕ್ಷದ ಕೆಲಸದಲ್ಲಿ ತೊಡಗಿಸಿಕೊಳ್ಳುತ್ತೇನೆ. ಈ ಪಕ್ಷ ಸ್ಥಾಪನೆ ತಮಿಳುನಾಡಿನ ಜನತೆಗೆ ಸಲ್ಲಿಸುವ ಕೃತಜ್ಞತೆಯಾಗಿದೆ’ ಎಂದು ವಿಜಯ್‌ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT