ಹಿಂದಿನ ತೀರ್ಪುಗಳನ್ನು ಉಲ್ಲೇಖಿಸಿರುವ ನ್ಯಾಯಪೀಠ, ‘ಕಡ್ಡಾಯ ನಿಯಮಗಳು ಇದ್ದಾಗ ಮಾತ್ರವೇ ಹೆಚ್ಚುವರಿ ಪಟ್ಟಿಯಲ್ಲಿರುವವರನ್ನು ಖಾಲಿ ಹುದ್ದೆಗಳಿಗೆ ನೇಮಕ ಮಾಡಬೇಕೆಂಬ ಪ್ರಶ್ನೆ ಉದ್ಭವಿಸುತ್ತದೆ. ಈ ರೀತಿಯ ನಿಯಮವೇ ಇಲ್ಲದಿರುವಾಗ ಇಂತಹ ಪಟ್ಟಿಯಲ್ಲಿರುವವರನ್ನು ಖಾಲಿ ಹುದ್ದೆಗಳಿಗೆ ನೇಮಿಸುವುದು ರಾಜ್ಯ ಸರ್ಕಾರದ ವಿವೇಚನೆಗೆ ಒಳಪಟ್ಟಿರುತ್ತದೆ’ ಎಂದು ತಿಳಿಸಿದೆ.