ಸೋಮವಾರ, 22 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಜಮ್ಮು: ಗಾಯಗೊಂಡ ಕಾನ್‌ಸ್ಟೆಬಲ್ ಭೇಟಿ ಮಾಡಿದ ಎಡಿಜಿಪಿ

Published 27 ಜೂನ್ 2024, 14:50 IST
Last Updated 27 ಜೂನ್ 2024, 14:50 IST
ಅಕ್ಷರ ಗಾತ್ರ

ಜಮ್ಮು: ಗುಂಡಿನ ಚಕಮಕಿಯಲ್ಲಿ ಗಾಯಗೊಂಡ ಪೊಲೀಸ್ ಅಧಿಕಾರಿಯೊಬ್ಬರ ಆರೋಗ್ಯವನ್ನು ವಿಚಾರಿಸಲು ಜಮ್ಮುವಿನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಆನಂದ್ ಜೈನ್ ಗುರುವಾರ ಸರ್ಕಾರಿ ವೈದ್ಯಕೀಯ ಕಾಲೇಜು (ಜಿಎಂಸಿ) ಆಸ್ಪತ್ರೆಗೆ ಭೇಟಿ ನೀಡಿದರು.

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಬುಧವಾರ ಆರು ಗಂಟೆಗೂ ಹೆಚ್ಚು ಕಾಲ ನಡೆದ ಗುಂಡಿನ ಚಕಮಕಿಯಲ್ಲಿ ಪಾಕಿಸ್ತಾನ ಮೂಲದ ಜೈಶ್-ಎ-ಮೊಹಮ್ಮದ್ (ಜೆಇಎಂ) ಸಂಘಟನೆಯೊಂದಿಗೆ ಸಂಬಂಧ ಹೊಂದಿರುವ ಶಂಕಿತ ಮೂವರು ಭಯೋತ್ಪಾದಕರು ಹತರಾಗಿದ್ದಾರೆ. ಅಲ್ಲದೇ ಈ  ಗುಂಡಿನ ಚಕಮಕಿಯಲ್ಲಿ  ಪೊಲೀಸ್ ಅಧಿಕಾರಿಯೊಬ್ಬರು ಗಾಯಗೊಂಡಿದ್ದಾರೆ.

ಜೈನ್ ಅವರು ದೋಡಾದ ಜಿಎಂಸಿ ಆಸ್ಪತ್ರೆಗೆ ಭೇಟಿ ನೀಡಿ ಗಾಯಗೊಂಡ ವಿಶೇಷ ದರ್ಜೆಯ ಕಾನ್‌ಸ್ಟೆಬಲ್ ಆಶಿಕ್ ಹುಸೇನ್ ಅವರ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ ಮತ್ತು  ಪೊಲೀಸ್ ಇಲಾಖೆಯಿಂದ ಸಾಧ್ಯವಿರುವ ಎಲ್ಲ ಸಹಾಯ ಮಾಡುವ ಭರವಸೆ ನೀಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT