ಕೋಲ್ಕತ್ತ: ಮುಂಬರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯನ್ನು ಇತರ ರಾಜ್ಯಗಳ ಚುನಾವಣೆಗಳೊಂದಿಗೆ ಸಂಯೋಜಿಸಬೇಡಿ ಎಂದು ಹಿರಿಯ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಶುಕ್ರವಾರ ಚುನಾವಣಾ ಆಯೋಗವನ್ನು ಒತ್ತಾಯಿಸಿದ್ದಾರೆ. ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯದಲ್ಲಿ ಭಯೋತ್ಪಾದನೆಯ ವಾತಾವರಣ ಸೃಷ್ಟಿಸಿದೆ ಎಂದು ಅವರು ಆರೋಪಿಸಿದ್ದಾರೆ.

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ವಿರೋಧ ಪಕ್ಷದ ನಾಯಕ, ಗುರುವಾರ ಅಲಿಪುರ್ದೂರ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ರ್ಯಾಲಿಗೆ ಹೋಗುತ್ತಿದ್ದ ಬಿಜೆಪಿ ಕಾರ್ಯಕರ್ತರು ಮತ್ತು ಬೆಂಬಲಿಗರ ಮೇಲೆ ಟಿಎಂಸಿ ಬೆಂಬಲಿತ ದುಷ್ಕರ್ಮಿಗಳು ದಾಳಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಪ್ರಧಾನಿಯವರ ರ್ಯಾಲಿಗೆ ತಲುಪದಂತೆ ತಡೆಯಲು ತೃಣಮೂಲ ಬೆಂಬಲಿತ ಗೂಂಡಾಗಳು 34 ವಾಹನಗಳನ್ನು ಧ್ವಂಸಗೊಳಿಸಿದ್ದಾರೆ ಮತ್ತು 22 ಬಿಜೆಪಿ ಕಾರ್ಯಕರ್ತರನ್ನು ಗಾಯಗೊಳಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಪ್ರಧಾನಿಯವರ ವಿರುದ್ಧ ತೃಣಮೂಲ ನಾಯಕರು ಬಳಸಿದ ಭಾಷೆ ಬೆದರಿಕೆ ಮತ್ತು ಪ್ರಜಾಪ್ರಭುತ್ವ ವಿರೋಧಿಯಾಗಿದೆ. ಅಂತಹ ಸಂದರ್ಭಗಳಲ್ಲಿ, ಪಶ್ಚಿಮ ಬಂಗಾಳದಲ್ಲಿ ಮುಕ್ತ ಮತ್ತು ನ್ಯಾಯಯುತ ಚುನಾವಣೆಗಳು ಸಾಧ್ಯವಿಲ್ಲ ಎಂದು ಅಧಿಕಾರಿ ಹೇಳಿಕೊಂಡಿದ್ದು, ರಾಜ್ಯದ ಚುನಾವಣೆಯನ್ನು ಅಸ್ಸಾಂ, ಬಿಹಾರ ಅಥವಾ ಕೇರಳದ ಚುನಾವಣೆಗಳೊಂದಿಗೆ ಸಂಯೋಜಿಸುವುದನ್ನು ತಪ್ಪಿಸಬೇಕು ಚುನಾವಣಾ ಆಯೋಗವನ್ನು ಒತ್ತಾಯಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ 2026ರಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ.

ವಿದ್ಯುತ್ ದರ ಏರಿಕೆ ಕುರಿತಂತೆ ರಾಜ್ಯಸರ್ಕಾರವನ್ನು ಅಧಿಕಾರಿ ತರಾಟೆಗೆ ತೆಗೆದುಕೊಂಡಿದ್ದಾರೆ.

2011ರಿಂದ ಗೃಹಬಳಕೆ ವಿದ್ಯುತ್ ದರ ಹಲವು ಪಟ್ಟು ಹೆಚ್ಚಾಗಿದೆ. ವಾಣಿಜ್ಯ ಬಳಕೆದಾರರು ಈಗ ಪ್ರತಿ ಯೂನಿಟ್ಗೆ ಸುಮಾರು ₹12 ಪಾವತಿಸುತ್ತಾರೆ ಮತ್ತು ಕೈಗಾರಿಕಾ ಬಳಕೆದಾರರು ಪ್ರತಿ ಯೂನಿಟ್ಗೆ ₹16 .ಗಳವರೆಗೆ ಪಾವತಿಸುತ್ತಾರೆ ಎಂದು ಅವರು ಹೇಳಿದ್ದಾರೆ.

ಬರಾಸತ್, ರಾಜರಹತ್, ದಮ್ ದಮ್ ಮತ್ತು ಬ್ಯಾರಕ್ಪೋರ್ ಸೇರಿದಂತೆ ಹಲವು ನಗರ ಪ್ರದೇಶಗಳಲ್ಲಿ ಸ್ಮಾರ್ಟ್ ವಿದ್ಯುತ್ ಮೀಟರ್ಗಳನ್ನು ಬಲವಂತವಾಗಿ ಅಳವಡಿಸುವುದರ ಬಗ್ಗೆ ಅಧಿಕಾರಿ ತೀವ್ರವಾಗಿ ಟೀಕಿಸಿದ್ದಾರೆ.

ವಿದ್ಯುತ್ ಕಾಯ್ದೆ ಮತ್ತು ಸಂಬಂಧಿತ ನಿಯಮಗಳ ಪ್ರಕಾರ, ಸ್ಮಾರ್ಟ್ ಮೀಟರ್ ಅಳವಡಿಕೆ ಕಡ್ಡಾಯವಲ್ಲ, ಐಚ್ಛಿಕವಾಗಿದೆ. ಆದರೂ, ಜನರು ಅವುಗಳನ್ನು ಸ್ವೀಕರಿಸುವಂತೆ ಒತ್ತಾಯಿಸಲಾಗುತ್ತಿದೆ ಎಂದು ಅವರು ದೂರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.