ನವದೆಹಲಿ: ಪಶ್ಚಿಮ ಬಂಗಾಳ ಕಾಂಗ್ರೆಸ್ನ ನೂತನ ಅಧ್ಯಕ್ಷರಾಗಿ ಅಧೀರ್ ರಂಜನ್ ಚೌಧರಿ ನೇಮಕವಾಗಿದ್ದಾರೆ.
ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು ಬುಧವಾರ ಈ ನಿರ್ಧಾರ ಕೈಗೊಂಡಿದ್ದಾರೆಂದು ಪಕ್ಷ ತಿಳಿಸಿದೆ.
ಅಧಿರ್ ರಂಜನ್ ಚೌಧರಿ ಅವರು ಗಾಂಧಿ ಪರಿವಾರಕ್ಕೆ ಆಪ್ತರಾಗಿದ್ದು, 2019ರಲ್ಲಿ ಸಾರ್ವಜನಿಕ ಖಾತೆಗಳ ಹದಿನೇಳನೇ ಲೋಕಸಭಾ ಸಮಿತಿಯ ಅಧ್ಯಕ್ಷರನ್ನಾಗಿ ಆಯ್ಕೆಯಾಗಿದ್ದರು.
ಪಶ್ಚಿಮ ಬಂಗಾಳದ ಮಾಜಿ ಕಾಂಗ್ರೆಸ್ ಅಧ್ಯಕ್ಷ ಸೋಮೆನ್ ಮಿತ್ತಾ ಅವರು ಜುಲೈನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದರು. ಆ ಹಿನ್ನೆಲೆಯಲ್ಲಿ ಅಧೀರ್ರಂಜನ್ ಚೌಧರಿಯವರ ನೇಮಕ ಅನಿವಾರ್ಯವಾಗಿತ್ತು ಎಂದು ಪಕ್ಷದ ಮೂಲಗಳು ತಿಳಿಸಿವೆ.
ಮುಂದಿನ ವರ್ಷ ಪಶ್ಚಿಮ ಬಂಗಾಳ ವಿಧಾನ ಸಭೆಗೆ ಚುನಾವಣೆಗಳು ನಡೆಯಲಿವೆ.