ಲಖನೌ: ಉತ್ತರಪ್ರದೇಶದ ಮಿಲ್ಕಿಪುರ ವಿಧಾನಸಭೆ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು, ತಮಿಳುನಾಡಿನ ಈರೋಡ್ ವಿಧಾನಸಭೆ ಉಪಚುನಾವಣೆಯಲ್ಲಿ ಡಿಎಂಕೆ ಪಕ್ಷವು ಮುನ್ನಡೆ ಸಾಧಿಸಿದೆ.

ಮಿಲ್ಕಿಪುರ ವಿಧಾನಸಭೆ ಉಪಚುನಾವಣೆ ಮತ್ತು ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸಲು ಕಾರಣರಾದ ಕಾರ್ಯಕರ್ತರನ್ನು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶನಿವಾರ ಶ್ಲಾಘಿಸಿದ್ದಾರೆ.
.Delhi Elections Reuslts: ಎಎಪಿಯಿಂದ ಗೆದ್ದ ಪ್ರಮುಖರು, ಸೋತ ಪ್ರಮುಖರು.Delhi Elections Results | ಗೆಲುವಿನತ್ತ BJP: ಜನ ಶಕ್ತಿಯೇ ಸರ್ವಶ್ರೇಷ್ಠ; ಮೋದಿ.
ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ, ಮಿಲ್ಕಿಪುರ ವಿಧಾನಸಭಾ ಉಪಚುನಾವಣೆ ಬಿಜೆಪಿ ಗೆಲುವಿಗೆ ಶ್ರಮಿಸಿದ ಕಾರ್ಯಕರ್ತರಿಗೆ ಅಭಿನಂದನೆಗಳು.ಈ ಗೆಲುವು ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಮತ್ತು ರಾಜ್ಯ ಸರ್ಕಾರದ ಜನ ಕಲ್ಯಾಣ ಯೋಜನೆ, ಅಭಿವೃದ್ಧಿಯ ಸಂಕೇತವಾಗಿದೆ ಎಂದು ತಿಳಿಸಿದ್ದಾರೆ.

'ಈ ಗೆಲುವು ಪ್ರಧಾನಿ ಮೋದಿಯವರ ಯಶಸ್ವಿ ನಾಯಕತ್ವ, ಅಭಿವೃದ್ಧಿ ನೀತಿಗಳ ಮೇಲಿನ ದೆಹಲಿ ಜನರ ನಂಬಿಕೆಯ ಮುದ್ರೆಯೂ ಆಗಿದೆ. ದೇಶದ ಅಭಿವೃದ್ಧಿಗಾಗಿ ಶ್ರಮಿಸಲು ಡಬಲ್ ಎಂಜಿನ್ ಸರ್ಕಾರ ನೆರವಾಗಲಿದೆ' ಎಂದು ಆದಿತ್ಯನಾಥ್ ಹೇಳಿದ್ದಾರೆ.

26 ವರ್ಷಗಳ ನಂತರ ಬಿಜೆಪಿ ದೆಹಲಿಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲಿದ್ದು, ಚುನಾವಣಾ ಆಯೋಗದ ಈಗಿನ ಟ್ರೆಂಡ್ ( ಸಂಜೆ 4.30) ಪ್ರಕಾರ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 48 ಹಾಗೂ ಎಎಪಿ 22 ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ.
.Delhi Election Results | ಎಎಪಿ ವರಿಷ್ಠ ಅರವಿಂದ ಕೇಜ್ರಿವಾಲ್ಗೆ ಸೋಲು.Delhi Results | ದೆಹಲಿಯ ಜನಾದೇಶವನ್ನು ಒಪ್ಪಿಕೊಳ್ಳುತ್ತೇವೆ: ಕೇಜ್ರಿವಾಲ್.Delhi results: ಕಾಂಗ್ರೆಸ್ ಹ್ಯಾಟ್ರಿಕ್ ಶೂನ್ಯ ಸಂಪಾದನೆ? ಬಿಜೆಪಿಗೆ ಗದ್ದುಗೆ.Delhi Election Results: ಮನೀಶ್ ಸಿಸೋಡಿಯಾಗೆ ಸೋಲು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.