ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಜಮ್ಮು ಮತ್ತು ಕಾಶ್ಮೀರದ ವಿಧಾನಸಭೆ ಚುನಾವಣೆಗೆ ನ್ಯಾಷನಲ್ ಕಾನ್ಫರೆನ್ಸ್ ಘೋಷಿಸಿರುವ ಪ್ರಣಾಳಿಕೆಯಲ್ಲಿ ದೇಶದ ಏಕತೆ, ಸಮಗ್ರತೆ ಮತ್ತು ರಾಷ್ಟ್ರೀಯ ಭದ್ರತೆಯ ಬಗ್ಗೆ ಆತಂಕ ಮೂಡಿಸುವ ಹಲವು ಅಂಶಗಳಿವೆ’ ಎಂದು ಹೇಳಿದ್ದಾರೆ.
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ ಆದಿತ್ಯನಾಥ್, ‘ಈ ಮಹತ್ವದ ಚುನಾವಣೆಯಲ್ಲಿ ‘ಇಂಡಿಯಾ’ ಮೈತ್ರಿಕೂಟವನ್ನು ಮುನ್ನಡೆಸುತ್ತಿರುವ ಕಾಂಗ್ರೆಸ್, ಅಬ್ದುಲ್ಲಾ ಆ್ಯಂಡ್ ಸನ್ಸ್ ಫ್ಯಾಮಿಲಿ ಪ್ರೈವೇಟ್ ಲಿಮಿಟೆಡ್‌ನ ನ್ಯಾಷನಲ್ ಕಾನ್ಫರೆನ್ಸ್‌ನೊಂದಿಗೆ ಮೈತ್ರಿ ಮಾಡಿಕೊಳ್ಳುವ ಮೂಲಕ ಮತ್ತೆ ತನ್ನ ದೇಶ ವಿರೋಧಿ ಉದ್ದೇಶಗಳು ಮತ್ತು ಮೀಸಲಾತಿ ವಿರೋಧಿ ಮುಖವಾಡವನ್ನು ದೇಶದ ಮುಂದೆ ಬಹಿರಂಗ ಪಡಿಸಿದೆ’ ಎಂದು ಹೇಳಿದ್ದಾರೆ.
ದ್ವೇಷವನ್ನು ಫಸಲು ಮಾಡಿರುವ ಕಾಂಗ್ರೆಸ್ ಹಾಗೂ ನ್ಯಾಷನಲ್ ಕಾನ್ಫರೆನ್ಸ್ ಪಕ್ಷಗಳ ರಾಜಕೀಯ ನೆಲೆ ಎಂದಿಂದಿಗೂ ಬರಡಾಗಿದೆ. ಭಯೋತ್ಪಾದನೆ ಮತ್ತು ಪ್ರತ್ಯೇಕತಾವಾದದ ಸಮಸ್ಯೆಗಳು ಚೆನಾಬ್ ನದಿಯ ನೀರಿನಲ್ಲಿ ವಿಲೀನಗೊಂಡಿದೆ ಎಂದು ಅವರು ಟೀಕಿಸಿದ್ದಾರೆ.
ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದ ಒಟ್ಟು 90 ಕ್ಷೇತ್ರಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಸೆ.18ರಂದು 24 ಕ್ಷೇತ್ರಗಳಿಗೆ ಮೊದಲ ಹಂತದ ಚುನಾವಣೆ ನಡೆಯಲಿದ್ದು, ಸೆ. 25ರಂದು 2ನೇ ಹಂತ ಹಾಗೂ ಅ. 1ರಂದು ಮೂರನೇ ಮತ್ತು ಅಂತಿಮ ಹಂತದ ಚುನಾವಣೆ ನಡೆಯಲಿದೆ. ಅಕ್ಟೋಬರ್ 4ರಂದು ಫಲಿತಾಂಶ ಪ್ರಕಟವಾಗಲಿದೆ.