ಬುಧವಾರ, 18 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಜೆಎಂಎಂನ ಮಾಜಿ ಶಾಸಕ ಲೋಬಿನ್ ಹೆಂಬ್ರಮ್‌ ಬಿಜೆಪಿಗೆ ಸೇರ್ಪಡೆ

Published : 31 ಆಗಸ್ಟ್ 2024, 15:42 IST
Last Updated : 31 ಆಗಸ್ಟ್ 2024, 15:42 IST
ಫಾಲೋ ಮಾಡಿ
Comments

ರಾಂಚಿ: ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಚಂಪೈ ಸೊರೇನ್‌ ಅವರು ಬಿಜೆಪಿ ಸೇರಿದ ಒಂದು ದಿನದ ನಂತರ, ಜಾರ್ಖಂಡ್‌ ಮುಕ್ತಿ ಮೋರ್ಚಾದ (ಜೆಎಂಎಂ) ಮಾಜಿ ಶಾಸಕ ಲೋಬಿನ್ ಹೆಂಬ್ರಮ್‌ ಶನಿವಾರ ಕಮಲ ಪಾಳಯಕ್ಕೆ ಸೇರ್ಪಡೆಗೊಂಡರು.

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಸಮ್ಮುಖದಲ್ಲಿ ರಾಜ್ಯ ಘಟಕದ ಅಧ್ಯಕ್ಷ ಬಾಬುಲಾಲ್ ಮರಾಂಡಿ ಅವರು ಹೆಂಬ್ರಮ್‌ ಅವರಿಗೆ ಬಿಜೆಪಿಯ ಸದಸ್ಯತ್ವ ನೀಡಿದರು.

‘ಜೆಎಂಎಂ, ಗುರೂಜಿ ಅವರ (ಜೆಎಂಎಂ ವರಿಷ್ಠ ಶಿಬು ಸೊರೇನ್‌) ಕಾಲದಲ್ಲಿ ಇದ್ದುದಕ್ಕಿಂತ ಇದೀಗ ಭಾರಿ ಬದಲಾವಣೆಯಾಗಿದೆ. ಪಕ್ಷದಲ್ಲಿ ಹಿರಿಯ ನಾಯಕರಿಗೆ ಗೌರವ ಇಲ್ಲದಾಗಿದೆ. ಆದ್ದರಿಂದ ಜಾರ್ಖಂಡ್‌ನ ಅಭಿವೃದ್ಧಿ ಹಾಗೂ ಬುಡಕಟ್ಟು ಜನರ ಉನ್ನತಿಗಾಗಿ ನಾನು ಬಿಜೆಪಿಗೆ ಸೇರಲು ನಿರ್ಧರಿಸಿರುವೆ’ ಎಂದು ಬೊರಿಯೊದ ಮಾಜಿ ಶಾಸಕರು ಇಲ್ಲಿನ ಬಿಜೆಪಿ ಕಚೇರಿಯಲ್ಲಿ ತಿಳಿಸಿದರು.

ಅಸ್ಸಾಂ ಮುಖ್ಯಮಂತ್ರಿ ಶರ್ಮಾ ಮಾತನಾಡಿ, ‘ಪ್ರತ್ಯೇಕ ಜಾರ್ಖಂಡ್‌ ಚಳವಳಿಯ ಭಾಗವಾಗಿದ್ದ ಪ್ರಮುಖ ನಾಯಕರು ಇದೀಗ ಬಿಜೆಪಿಗೆ ಸೇರ್ಪಡೆಗೊಳ್ಳುತ್ತಿದ್ದಾರೆ. ಪಕ್ಷವು ರಾಜ್ಯದ ಸಮಗ್ರ ಅಭಿವೃದ್ಧಿಗೆ ಶ್ರಮಿಸಲಿದೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT