ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು, ದೆಹಲಿ ಬಳಿಕ ಅಹಮದಾಬಾದ್‌ನ ಶಾಲೆಗಳಿಗೆ ಬಾಂಬ್ ಬೆದರಿಕೆ

Published 6 ಮೇ 2024, 6:48 IST
Last Updated 6 ಮೇ 2024, 6:48 IST
ಅಕ್ಷರ ಗಾತ್ರ

ಅಹಮದಾಬಾದ್: ಅಹಮದಾಬಾದ್‌ನ ಹಲವಾರು ಶಾಲೆಗಳಿಗೆ ಇಂದು (ಸೋಮವಾರ) ಬಾಂಬ್ ಬೆದರಿಕೆ ಇ –ಮೇಲ್‌ಗಳು ಬಂದಿವೆ. ಇದರಿಂದಾಗಿ ಶಾಲಾ ಸಿಬ್ಬಂದಿ ಸೇರಿದಂತೆ ವಿದ್ಯಾರ್ಥಿಗಳು ಮತ್ತು ಪೋಷಕರು ಆತಂಕಕ್ಕೀಡಾಗಿದ್ದಾರೆ.

ಬಾಂಬ್ ಬೆದರಿಕೆ ಇ–ಮೇಲ್ ಬಂದಿರುವ ಶಾಲೆಗಳಿಗೆ ಪೊಲೀಸರು, ಬಾಂಬ್ ಪತ್ತೆ ಮತ್ತು ಬಾಂಬ್‌ ನಿಷ್ಕ್ರಿಯ ದಳದ (ಬಿಡಿಡಿಎಸ್) ಸಿಬ್ಬಂದಿ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಈಚೆಗೆ ದೆಹಲಿಯ 100ಕ್ಕೂ ಅಧಿಕ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದ್ದು, ಈ ಪ್ರಕರಣಕ್ಕೂ ಬೆಂಗಳೂರಿನ ಬಾಂಬ್‌ ಬೆದರಿಕೆ ಪ್ರಕರಣಕ್ಕೂ ಸಾಮ್ಯತೆ ಇರುವ ಅನುಮಾನದಡಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ದೆಹಲಿಯ ಶಾಲೆಗಳಿಗೆ ರಷ್ಯಾದ ಕಂಪನಿಯೊಂದರ ಸರ್ವರ್‌ನಿಂದ ಇ–ಮೇಲ್ ಬಂದಿರುವ ಬಗ್ಗೆ ಮಾಹಿತಿ ಲಭ್ಯವಾಗಿತ್ತು.

2023ರ ಡಿಸೆಂಬರ್‌ನಲ್ಲಿ ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 70 ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ–ಮೇಲ್ ಬಂದಿತ್ತು. ಯಶವಂತಪುರದ ಕೇಂದ್ರೀಯ ವಿದ್ಯಾಲಯಕ್ಕೂ ಫೆಬ್ರುವರಿಯಲ್ಲಿ ಬಾಂಬ್‌ ಬೆದರಿಕೆ ಹಾಕಲಾಗಿತ್ತು.

ದೆಹಲಿ ಶಾಲೆಗಳ ಮಾದರಿಯಲ್ಲಿಯೇ ಬೆಂಗಳೂರಿನ ಶಾಲೆಗಳಿಗೂ ಬಾಂಬ್ ಬೆದರಿಕೆ ಬಂದಿರುವ ಸಂಶಯ ವ್ಯಕ್ತವಾಗಿದೆ. ಇದೇ ಕಾರಣಕ್ಕೆ ಬೆಂಗಳೂರು ಪೊಲೀಸರು, ದೆಹಲಿ ಪೊಲೀಸರನ್ನು ಸಂಪರ್ಕಿಸಿ ಮಾಹಿತಿ ಕಲೆಹಾಕಲು ಯತ್ನಿಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT