ನವದೆಹಲಿ:ಜೆಇಇ ಮೇನ್ ನಂತರ ರಾಷ್ಡ್ರೀಯ ಪರೀಕ್ಷಾ ಏಜೆನ್ಸಿ (ಎನ್ಟಿಎ) ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನೀಟ್ (ರಾಷ್ಟ್ರೀಯ ಪ್ರವೇಶ ಮತ್ತು ಅರ್ಹತಾ ಪರೀಕ್ಷೆ) ನಡೆಸಲು ಸಿದ್ಧತೆ ನಡೆಸಿದೆ.

ಸೆ. 13ರಂದು ನಡೆಯಲಿರುವ ಈ ಪರೀಕ್ಷೆಗಾಗಿ 15 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ನೋಂದಣಿ ಮಾಡಿಸಿದ್ದಾರೆ.

ಎಂಜಿನಿಯರಿಂಗ್ ಕೋರ್ಸ್ಗಳ ಪ್ರವೇಶಕ್ಕಾಗಿನ ಜೆಇಇ (ಮೇನ್) ಸೆಪ್ಟಂಬರ್ 1ರಂದು ಆರಂಭವಾಗಿ, ಭಾನುವಾರ ಮುಕ್ತಾಯವಾಯಿತು.ವೃತ್ತಿಪರ ಶಿಕ್ಷಣಕ್ಕೆ ಸಂಬಂಧಿಸಿದ ಈ ಪರೀಕ್ಷೆಗಳನ್ನು ಕೋವಿಡ್–19 ಕಾರಣದಿಂದಾಗಿ ಎರಡು ಬಾರಿ ಮುಂದೂಡಲಾಗಿತ್ತು.

ಕೋವಿಡ್–19 ವ್ಯಾಪಿಸುವ ಆತಂಕದ ನಡುವೆ ಮತ್ತೊಂದು ಪ್ರಮುಖ ಪರೀಕ್ಷೆ ಸಂಘಟಿಸಲು ಮುಂದಾಗಿರುವ ಎನ್ಟಿಎ ವ್ಯಕ್ತಿಗತ ಅಂತರ ಕಾಯ್ದುಕೊಳ್ಳುವ ಸಲುವಾಗಿ ಪರೀಕ್ಷಾ ಕೇಂದ್ರಗಳ ಸಂಖ್ಯೆಯನ್ನು ಹೆಚ್ಚಿಸಿದೆ. ಈ ಮೊದಲು 2,546 ಕೇಂದ್ರಗಳನ್ನು ಸ್ಥಾಪಿಸಲಾಗಿತ್ತು. ಅವುಗಳ ಸಂಖ್ಯೆಯನ್ನು 3,843ಕ್ಕೆ ಹೆಚ್ಚಿಸಲಾಗಿದೆ.

ಪ್ರತಿ ಕೊಠಡಿಯಲ್ಲಿ 24 ಜನರ ಬದಲಾಗಿ 12 ಜನ ವಿದ್ಯಾರ್ಥಿಗಳಿಗೆ ಆಸನಗಳ ವ್ಯವಸ್ಥೆ ಮಾಡಲಾಗಿದೆ ಎಂದು ಎನ್ಟಿಎ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.