ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಡಿಯೊ ವೈರಲ್‌: 40 ಸಂಚಾರ ಪೊಲೀಸರ ವರ್ಗಾವಣೆ

Published 18 ಫೆಬ್ರುವರಿ 2024, 15:41 IST
Last Updated 18 ಫೆಬ್ರುವರಿ 2024, 15:41 IST
ಅಕ್ಷರ ಗಾತ್ರ

ಠಾಣೆ: ಮುಂಬೈ ನಗರದಲ್ಲಿ ಸಂಚಾರ ಪೊಲೀಸರು ವಾಹನ ಸವಾರರಿಂದ ಲಂಚ ಸ್ವೀಕರಿಸುತ್ತಿರುವ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಬೆನ್ನಲ್ಲೇ 40 ಸಂಚಾರ ಪೊಲೀಸರನ್ನು ವರ್ಗಾವಣೆ ಮಾಡಲಾಗಿದೆ’ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

‘ಮುಂಬ್ರಾ ವಿಭಾಗದ ಹಿರಿಯ ಇನ್‌ಸ್ಪೆಕ್ಟರ್‌ ಸುರೇಶ್‌ ಖೇಡೆಕರ್‌ ಮತ್ತು ಇಬ್ಬರು ಎಎಸ್‌ಐಗಳು ಸೇರಿದಂತೆ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಒಟ್ಟು 40 ಪೊಲೀಸರನ್ನು ಕಂಟ್ರೋಲ್‌ ರೂಮ್‌ಗೆ ವರ್ಗಾವಣೆ ಮಾಡಲಾಗಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಪರೀತ ಸಂಚಾರ ದಟ್ಟಣೆಯಿರುವ ಮುಂಬ್ರಾ ರಸ್ತೆಯಲ್ಲಿ ಸಂಚಾರಕ್ಕೆ ಅವಕಾಶ ನೀಡಲು ಘನ ವಾಹನ ಚಾಲಕರಿಂದ ಸಂಚಾರ ಪೊಲೀಸರು ಲಂಚ ಸ್ವೀಕರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT