ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಅಗ್ನಿಪಥ’ ಹಿಂಸಾಚಾರ: ಬಿಹಾರ ಬಿಜೆಪಿ ಅಧ್ಯಕ್ಷರ ಮನೆ ಮೇಲೆ ದಾಳಿ

ಅಕ್ಷರ ಗಾತ್ರ

ಪಟ್ನಾ: ಸೇನೆಯ ಅಲ್ಪಾವಧಿ ನೇಮಕಾತಿ ಯೋಜನೆ 'ಅಗ್ನಿಪಥ' ವಿರುದ್ಧ ಬಿಹಾರದಲ್ಲಿ ನಡೆಯುತ್ತಿರುವ ಪ್ರತಿಭಟನೆ ಶುಕ್ರವಾರವೂ ಹಿಂಸಾರೂಪ ಪಡೆದುಕೊಂಡಿದೆ.

ಪ್ರತಿಭಟನಾಕಾರರು ಸಾರ್ವಜನಿಕ ಆಸ್ತಿಯನ್ನು ಗುರಿಯಾಗಿಸಿ ದಾಳಿ ನಡೆಸುತ್ತಿದ್ದು, ರೈಲುಗಳಿಗೆ ಬೆಂಕಿ ಹಚ್ಚಿದ್ದಾರೆ.

ಆಡಳಿತ ಪಕ್ಷ ಹಾಗೂ ಬಿಜೆಪಿ ಮುಖಂಡರ ಮನೆಗಳ ಮೇಲೆಯೂ ದಾಳಿಗಳು ನಡೆಯುತ್ತಿವೆ.

ಪಶ್ಚಿಮ ಚಂಪಾರಣ್ ಜಿಲ್ಲೆಯ ಬೆತಿಯಾದಲ್ಲಿರುವ ಬಿಹಾರ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸಂಜಯ್ ಜೈಸ್ವಾಲ್ ಅವರ ನಿವಾಸದ ಮೇಲೆ ದಾಳಿ ನಡೆದಿದೆ.

ದಾಳಿಯನ್ನು ತಡೆಯಲು ಯತ್ನಿಸಿದ ಪೊಲೀಸರ ಮೇಲೆಯೂ ಪ್ರತಿಭಟನಾಕಾರರು ಹಲ್ಲೆ ನಡೆಸಿರುವ ಕುರಿತು ಸುದ್ದಿಸಂಸ್ಥೆ ‘ಎಎನ್‌ಐ’ ವರದಿ ಮಾಡಿದೆ.

ಇದೇ ವೇಳೆ, ಉಪಮುಖ್ಯಮಂತ್ರಿ ರೇಣು ದೇವಿ ಅವರ ಮನೆ ಮೇಲೆ ದಾಳಿ ನಡೆದಿರುವ ಬಗ್ಗೆಯೂ ವರದಿಯಾಗಿದೆ.

ಅಗ್ನಿಪಥ ಯೋಜನೆ ವಿರುದ್ಧ ಬಿಹಾರ ಮಾತ್ರವಲ್ಲದೆ, ಉತ್ತರ ಪ್ರದೇಶದ, ರಾಜಸ್ಥಾನ, ತೆಲಂಗಾಣ ಹಾಗೂ ಹರಿಯಾಣದಲ್ಲಿಯೂ ಪ್ರತಿಭಟನೆಗಳು ನಡೆಯುತ್ತಿವೆ.

ಸೇನಾ ಪಡೆಗಳಿಗೆ ಯುವ ಜನರನ್ನು ನಾಲ್ಕು ವರ್ಷಗಳ ಅವಧಿಗೆ ನೇಮಕ ಮಾಡಿಕೊಳ್ಳುವ ‘ಅಗ್ನಿಪಥ ಯೋಜನೆ’ಯನ್ನು ಕೇಂದ್ರ ಸರ್ಕಾರವು ಮಂಗಳವಾರ ಪ್ರಕಟಿಸಿತ್ತು. ಇದಕ್ಕೆ ಪ್ರತಿಪಕ್ಷಗಳಿಂದಲೂ ವಿರೋಧ ವ್ಯಕ್ತವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT