ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಗ್ನಿಪಥ ಯೋಜನೆಯಿಂದ ದೇಶದ ಯುವಕರಿಗೆ ಅನ್ಯಾಯ: ರಾಷ್ಟ್ರಪತಿಗೆ ಖರ್ಗೆ ಪತ್ರ

Published 26 ಫೆಬ್ರುವರಿ 2024, 7:55 IST
Last Updated 26 ಫೆಬ್ರುವರಿ 2024, 7:55 IST
ಅಕ್ಷರ ಗಾತ್ರ

ನವದೆಹಲಿ: ಅಗ್ನಿಪಥ ಯೋಜನೆಯಿಂದಾಗಿ ಸಶಸ್ತ್ರ ಪಡೆಗಳಲ್ಲಿ ಉದ್ಯೋಗವನ್ನು ಬಯಸುತ್ತಿರುವ ದೇಶದ ಯುವಕರಿಗೆ ಬಾರಿ ಅನ್ಯಾಯವಾಗಿದೆ. ಅವರಿಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿದ್ದಾರೆ.

ಸಶಸ್ತ್ರ ಪಡೆಗಳಲ್ಲಿನ ನಿಯಮಿತ ನೇಮಕಾತಿ ಪ್ರಕ್ರಿಯೆ ಅಂತ್ಯಗೊಂಡಿರುವುದರಿಂದ ಸುಮಾರು 2 ಲಕ್ಷ ಯುವಕ–ಯುವತಿಯರ ಭವಿಷ್ಯ ಅತಂತ್ರವಾಗಿದೆ ಎಂದು ರಾಷ್ಟ್ರಪತಿಗಳಿಗೆ ಬರೆದ ಪತ್ರದಲ್ಲಿ ಖರ್ಗೆ ತಿಳಿಸಿದ್ದಾರೆ.

ರಾಷ್ಟ್ರಪತಿಗಳು ಭಾರತೀಯ ಸಶಸ್ತ್ರ ಪಡೆಗಳ ಸರ್ವೋಚ್ಚ ಕಮಾಂಡರ್‌ ಕೂಡ ಆಗಿದ್ದಾರೆ.

ತಮ್ಮ ಕನಸಿನ ಉದ್ಯೋಗವನ್ನು ಪಡೆಯಲು ಈ ಯುವಕರು ಹಲವು ವರ್ಷಗಳನ್ನು ಕಳೆದಿದ್ದಾರೆ. ಆದರೆ, ಉದ್ಯೋಗ ಸಿಗದೆ ಆತ್ಮಹತ್ಯೆಗೆ ಕಾರಣವಾಗಿದೆ ಎಂದು ಖರ್ಗೆ ಪ್ರತಿಪಾದಿಸಿದ್ದಾರೆ.

‘ನಮ್ಮ ಯುವಕರು ಈ ರೀತಿಯ ತೊಂದರೆಯನ್ನು ಅನುಭವಿಸಬಾರದು. ಆದ್ದರಿಂದ ಇವರಿಗೆ ನ್ಯಾಯವನ್ನು ಒದಗಿಸಬೇಕೆಂದು ನಾನು ನಿಮಗೆ ಮನವಿ ಮಾಡುತ್ತೇನೆ’ ಎಂದು ಅವರು ಹೇಳಿದ್ದಾರೆ.

2022ರ ಜೂನ್‌ನಲ್ಲಿ ಸಶಸ್ತ್ರ ಪಡೆಗಳಲ್ಲಿ ಸೇವೆ ಸಲ್ಲಿಸಲು ಭಾರತೀಯ ಯುವಕರಿಗೆ ಅವಕಾಶ ಕಲ್ಪಿಸುವ ‘ಅಗ್ನಿಪಥ’ ಎಂಬ ಹೊಸ ನೇಮಕಾತಿ ಯೋಜನೆಯನ್ನು ರೂಪಿಸಲಾಯಿತು. ಇದರನ್ವಯ ಯುವಕರಿಗೆ ನಾಲ್ಕು ವರ್ಷಗಳ ಅವಧಿಗೆ ಭಾರತೀಯ ಸಶಸ್ತ್ರ ಪಡೆಗಳ ಮೂರು ಸೇವೆಗಳಲ್ಲಿ (ಭೂಸೇನೆ, ನೌಕಾಪಡೆ ಮತ್ತು ವಾಯುಪಡೆ) ಸೇವೆ ಸಲ್ಲಿಸಲು ಅವಕಾಶ ನೀಡಲಾಗುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT