ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶ ರಕ್ಷಣೆ ಕನಸು ಹೊತ್ತಿರುವ ಯುವಕರಿಗೆ ‘ಅಗ್ನಿಪಥ’ ಯೋಜನೆಯಿಂದ ಅವಮಾನ: ರಾಹುಲ್

Published 16 ಏಪ್ರಿಲ್ 2024, 12:27 IST
Last Updated 16 ಏಪ್ರಿಲ್ 2024, 12:27 IST
ಅಕ್ಷರ ಗಾತ್ರ

ನವದೆಹಲಿ: ಅಗ್ನಿಪಥ ಯೋಜನೆ ಕುರಿತು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿರುವ ಅವರು, ‘ಅಗ್ನಿಪಥ ಯೋಜನೆಯಿಂದ ಭಾರತೀಯ ಸೇನೆಗೆ ಸೇರಬೇಕೆಂಬ ಮತ್ತು ದೇಶವನ್ನು ರಕ್ಷಿಸುವ ಕನಸು ಕಾಣುವ ಯುವಕರಿಗೆ ಅವಮಾನವಾಗಿದೆ. ಅಗ್ನಿಪಥ ಯೋಜನೆಯನ್ನು ಪ್ರಧಾನಿ ಮೋದಿ ಅವರ ಕಚೇರಿಯಲ್ಲಿ ರೂಪಿಸಿ, ಸಶಸ್ತ್ರ ಪಡೆಗಳ ಮೇಲೆ ಹೇರಲಾಗಿದೆ‘ ಎಂದು ಅವರು ಆರೋಪಿಸಿದ್ದಾರೆ.

ಕೇಂದ್ರದಲ್ಲಿ ‘ಇಂಡಿಯಾ’ ಮೈತ್ರಿಕೂಟ ಸರ್ಕಾರ ರಚನೆಯಾದ ತಕ್ಷಣವೇ ಅಗ್ನಿಪಥ ಯೋಜನೆಯನ್ನು ರದ್ದುಪಡಿಸಲಾಗುವುದು ಮತ್ತು ಹಳೆಯ ಶಾಶ್ವತ ನೇಮಕಾತಿ ಪ್ರಕ್ರಿಯೆಯನ್ನು ಮರಳಿ ತರಲಾಗುವುದು ಎಂದು ರಾಹುಲ್‌ ಭರವಸೆ ನೀಡಿದ್ದಾರೆ.

2022ರ ಜೂನ್‌ನಲ್ಲಿ ಸಶಸ್ತ್ರ ಪಡೆಗಳಲ್ಲಿ ಸೇವೆ ಸಲ್ಲಿಸಲು ಭಾರತೀಯ ಯುವಕರಿಗೆ ಅವಕಾಶ ಕಲ್ಪಿಸುವ ‘ಅಗ್ನಿಪಥ’ ಎಂಬ ಹೊಸ ನೇಮಕಾತಿ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿತ್ತು. ಇದರನ್ವಯ ಯುವಕರಿಗೆ ನಾಲ್ಕು ವರ್ಷಗಳ ಅವಧಿಗೆ ಭಾರತೀಯ ಸೇನಾಪಡೆಗಳಲ್ಲಿ ಸೇವೆ ಸಲ್ಲಿಸಲು ಅವಕಾಶ ನೀಡಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT