ನವದೆಹಲಿ:ನೂತನ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವರಾಗಿ ಶೋಭಾ ಕರಂದ್ಲಾಜೆ ಅವರು ಗುರುವಾರ ದೆಹಲಿಯಲ್ಲಿ ಅಧಿಕಾರ ಸ್ವೀಕರಿಸಿದರು. ಈ ವೇಳೆ ಕೇಂದ್ರ ಸಚಿವರಾದ ಶ್ರೀ ಪ್ರಹ್ಲಾದ್ ಜೋಷಿ, ಶ್ರೀ ನರೇಂದ್ರ ಸಿಂಗ್ ತೋಮರ್, ಶ್ರೀ ಕೈಲಾಶ್ ಚೌಧರಿ ಹಾಗೂ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

ಚಿಕ್ಕಮಗಳೂರು–ಉಡುಪಿ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಶೋಭಾ ಕರಂದ್ಲಾಜೆ ಅವರುಬಿಜೆಪಿ ನೇತೃತ್ವದ ಸರ್ಕಾರದಲ್ಲಿ ಕರ್ನಾಟಕದಿಂದ ಕೇಂದ್ರ ಸಚಿವ ಸಂಪುಟ ಸೇರಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಶೋಭಾ ಎರಡನೇ ಬಾರಿಗೆ ಲೋಕಸಭಾ ಚುನಾವಣೆಯಲ್ಲಿ ಗೆದ್ದಿರುವುದು ಮಾತ್ರವಲ್ಲದೆ, ಹಿಂದೆ ರಾಜ್ಯದಲ್ಲಿ ಸಚಿವರಾಗಿ ಕಾರ್ಯ ನಿರ್ವಹಿಸಿ ಅನುಭವ ಹೊಂದಿದ್ದಾರೆ.2019 ರ ಲೋಕಸಭಾ ಚುನಾವಣೆ ಬಳಿಕ ಬಹುತೇಕ ನೇಪಥ್ಯ ಸರಿದಿದ್ದ ಅವರು, ಬಹಿರಂಗ ಹೇಳಿಕೆಗಳನ್ನು ಕೊಡುವುದನ್ನೂ ಕಡಿಮೆ ಮಾಡಿದ್ದರು. 2018 ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ರಾಜ್ಯದಿಂದ ಸ್ಪರ್ಧಿಸುವ ಬಗ್ಗೆ ಒಲವು ಹೊಂದಿದ್ದರು. ಕೇಂದ್ರ ನಾಯಕತ್ವ ಅದಕ್ಕೆ ಅವಕಾಶ ನೀಡಿರಲಿಲ್ಲ.

₹12 ಕೋಟಿ ಲಂಚ ಆರೋಪ: ಯಡಿಯೂರಪ್ಪ ವಿರುದ್ಧದ ಖಾಸಗಿ ದೂರು ವಜಾ

2019 ರ ಲೋಕಸಭೆಯಲ್ಲಿ ಗೆದ್ದ ಬಳಿಕ ಅವರು ಪಕ್ಷದ ಚಟುವಟಿಕೆಯಿಂದಲೂ ದೂರ ಉಳಿದಿದ್ದರು. ಯಡಿಯೂರಪ್ಪ ಅವರ ಜತೆಗೆ ನಿಕಟ ಒಡನಾಟ ಹೊಂದಿದ್ದ ಶೋಭಾ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದ ಬಳಿಕ ಅಂತರ ಕಾಯ್ದುಕೊಂಡಿದ್ದರು. ಅದಕ್ಕೆ, ಯಡಿಯೂರಪ್ಪನವರ ಕುಟುಂಬದವರು ಕಾರಣ ಎಂದೂ ಹೇಳಲಾಗಿತ್ತು. ಅಲ್ಲದೇ, ಕರ್ನಾಟಕದ ಸರ್ಕಾರ ಹಾಗೂ ರಾಜಕಾರಣದಲ್ಲಿ ತಲೆ ಹಾಕದಂತೆ ಪಕ್ಷದ ವರಿಷ್ಠರು ಶೋಭಾ ಅವರಿಗೆ ಸ್ಪಷ್ಟ ಸೂಚನೆಯನ್ನು ನೀಡಿದ್ದರು ಎನ್ನಲಾಗುತ್ತಿದೆ.

ಇದೀಗ, ಕೇಂದ್ರ ನಾಯಕತ್ವ ರಾಷ್ಟ್ರೀಯ ಮಟ್ಟದಲ್ಲಿ ಕಾರ್ಯ ನಿರ್ವಹಿಸಲು ಅವರಿಗೆ ಶೋಭಾ ಅವಕಾಶ ನೀಡಿದೆ.

ಶಾಲೆ ಆರಂಭಿಸಲು ಪೋಸ್ಟ್ ಕಾರ್ಡ್ ಅಭಿಯಾನ, ಶಿಕ್ಷಣ ಸಚಿವರಿಗೆ ಸಾವಿರಾರು ಪತ್ರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.