ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭಾ ಚುನಾವಣೆ: ಬಿಜೆಪಿ ಪ್ರಣಾಳಿಕೆ ರಚಿಸಲು ಜನರಿಂದ ಸಲಹೆ ಕೇಳಿದ ಜೆ.ಪಿ ನಡ್ಡಾ

Published 26 ಫೆಬ್ರುವರಿ 2024, 10:20 IST
Last Updated 26 ಫೆಬ್ರುವರಿ 2024, 10:20 IST
ಅಕ್ಷರ ಗಾತ್ರ

ನವದೆಹಲಿ: 2024ರ ಲೋಕಸಭಾ ಚುನಾವಣೆಗೆ ಪ್ರಣಾಳಿಕೆ ಸಿದ್ಧಪಡಿಸಲು ಸಾರ್ವಜನಿಕರಿಂದ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಸಲಹೆಗಳನ್ನು ಆಹ್ವಾನಿಸಿದ್ದಾರೆ.

ಪಕ್ಷದ ಪ್ರಣಾಳಿಕೆ ರಚಿಸಲು ಸಲಹೆ ಪಡೆಯಲು ‌ಬಿಜೆಪಿ ದೇಶದಾದ್ಯಂತ ಅಭಿಯಾನ ಆರಂಭಿಸಿದ್ದು, ಅದಕ್ಕೆ  ನಡ್ಡಾ ಚಾಲನೆ ನೀಡಿದರು.

ಅಭಿಯಾನದ ಭಾಗವಾಗಿ, ನಡ್ಡಾ ಅವರು ದೆಹಲಿಯ ಪಕ್ಷದ ಪ್ರಧಾನ ಕಚೇರಿಯಿಂದ ಅಭಿಯಾನದಲ್ಲಿ ತೊಡಗಿಗೊಳ್ಳುವ ವಾಹನಗಳಿಗೆ ಚಾಲನೆ ನೀಡಿದರು. ಪ್ರಧಾನಿ ನರೇಂದ್ರ ಮೋದಿ ಅವರ ಕೆಲಸ ಮತ್ತು ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವ ಅವರ ದೂರದೃಷ್ಟಿಯನ್ನು ಎತ್ತಿ ತೋರಿಸುವುದು ಈ ಅಭಿಯಾನದ ಉದ್ದೇಶವಾಗಿದೆ.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡಲು ಈ 'ಅಮೃತ ಕಾಲ'ದಲ್ಲಿ ಕೆಲಸ ಮಾಡಲಾಗುತ್ತಿದೆ. 2024ರ ಲೋಕಸಭೆ ಚುನಾವಣೆಗೆ ಪಕ್ಷದ ‘ಸಂಕಲ್ಪ ಪತ್ರ’ (ಪ್ರಣಾಳಿಕೆ) ಸಿದ್ಧಪಡಿಸುವ ಕೆಲಸ ಪ್ರಗತಿಯಲ್ಲಿದೆ. ಅದಕ್ಕಾಗಿ ಜನರಿಂದ ಸಲಹೆಗಳನ್ನು ‌ಆಹ್ವಾನಿಸಲಾಗಿದೆ ಎಂದು ನಡ್ಡಾ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT