ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರೈತರಿಂದ 'ದೆಹಲಿ ಚಲೋ'; ಕಠಿಣ ಕ್ರಮ ಕೈಗೊಳ್ಳುವುದಾಗಿ ಹರಿಯಾಣ ಪೊಲೀಸ್ ಎಚ್ಚರಿಕೆ

Published 8 ಫೆಬ್ರುವರಿ 2024, 11:20 IST
Last Updated 8 ಫೆಬ್ರುವರಿ 2024, 11:20 IST
ಅಕ್ಷರ ಗಾತ್ರ

ಅಂಬಾಲಾ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರೈತರು ಮುಂದಿನ ವಾರ 'ದೆಹಲಿ ಚಲೋ' ಆಂದೋಲನ ಹಮ್ಮಿಕೊಂಡಿದ್ದಾರೆ. ಆದರೆ ಅನುಮತಿ ಇಲ್ಲದೆ ಯಾರೂ ಕೂಡ ಭಾಗವಹಿಸಬಾರದು, ಸಾರ್ವಜನಿಕ ಆಸ್ತಿಗೆ ಹಾನಿ ಮಾಡಿದ್ದಲ್ಲಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಹರಿಯಾಣ ಪೊಲೀಸರು ಎಚ್ಚರಿಸಿದ್ದಾರೆ.

ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಕಾನೂನಿಗೆ ಮತ್ತು ಸ್ವಾಮಿನಾಥನ್ ಶಿಫಾರಸುಗಳ ಅನುಷ್ಠಾನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಫೆಬ್ರುವರಿ 13ರಂದು ದೆಹಲಿ ಚಲೋ ಆಂದೋಲನ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಹರಿಯಾಣ ಪೊಲೀಸ್ ಎಚ್ಚರಿಸಿದೆ.

ಈವರೆಗೆ ಯಾವುದೇ ರೈತ ಸಂಘಟನೆಗಳು ಪ್ರತಿಭಟನೆಗೆ ಅನುಮತಿ ಕೋರಿಲ್ಲ ಎಂದು ಅಂಬಾಲಾ ಎಸ್‌ಪಿ ಜಶನ್‌ದೀಪ್ ಸಿಂಗ್ ರಾಂಧವಾ ಹೇಳಿದ್ದಾರೆ.

ಅನುಮತಿಯಿಲ್ಲದೆ ಯಾವುದೇ ವ್ಯಕ್ತಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಲ್ಲಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು. ಸಾರ್ವಜನಿಕ ಆಸ್ತಿಯನ್ನು ಹಾನಿಗೊಳಿಸಿದ್ದಲ್ಲಿ ಸಾರ್ವಜನಿಕ ಆಸ್ತಿ ಹಾನಿ ತಡೆ ಕಾಯ್ದೆ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದರು.

ಪ್ರತಿಭಟನಾಕಾರರ ಬ್ಯಾಂಕ್‌ ಖಾತೆಯೊಂದನ್ನು ಮುಟ್ಟುಗೋಲು ಹಾಕಿಕೊಳ್ಳುವ ಮೂಲಕ ಸರ್ಕಾರಿ ಆಸ್ತಿಗೆ ಆಗುವ ನಷ್ಟವನ್ನು ಸರಿದೂಗಿಸಲಾಗುವುದು ಎಂದು ಸಹ ಅವರು ಹೇಳಿದರು.

ರೈತರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕೇಂದ್ರವನ್ನು ಒತ್ತಾಯಿಸಲು ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ಚಳವಳಿಗೆ ಕರೆ ನೀಡಿದೆ. ದೆಹಲಿ ಚಲೋ ಆಂದೋಲನದಲ್ಲಿ 200ಕ್ಕೂ ಹೆಚ್ಚು ರೈತ ಸಂಘಟನೆಗಳು ಭಾಗವಹಿಸುವ ಸಾಧ್ಯತೆಯಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT