ಸೋಮವಾರ, 26 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಯೋಧ್ಯೆಗೆ ಪ್ರಧಾನಿ ಭೇಟಿ: ಸುಲ್ತಾನ್‌ಪುರದಲ್ಲಿ ನಾಲ್ವರು ಕಾಶ್ಮೀರಿಗಳು ವಶಕ್ಕೆ

Published 30 ಡಿಸೆಂಬರ್ 2023, 9:52 IST
Last Updated 30 ಡಿಸೆಂಬರ್ 2023, 9:52 IST
ಅಕ್ಷರ ಗಾತ್ರ

ಸುಲ್ತಾನ್‌ಪುರ (ಉತ್ತರ ಪ್ರದೇಶ): ಪ್ರಧಾನಿ ನರೇಂದ್ರ ಮೋದಿ ಅಯೋಧ್ಯೆಗೆ ಭೇಟಿ ನೀಡುವ ಮುನ್ನ, ಪಕ್ಕದ ಸುಲ್ತಾನ್‌ಪುರ ಜಿಲ್ಲೆಯಲ್ಲಿ ಓರ್ವ ಮಹಿಳೆ ಸೇರಿದಂತೆ ನಾಲ್ವರು ಕಾಶ್ಮೀರಿ ಪ್ರಜೆಗಳನ್ನು ವಶಕ್ಕೆ ಪಡೆಯಲಾಗಿದೆ. ಮುಂಜಾಗ್ರತೆಗಾಗಿ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶುಕ್ರವಾರ ರಾತ್ರಿ ಹೋಟೆಲ್‌ ಒಂದರಿಂದ ಇವರನ್ನು ವಶಕ್ಕೆ ಪಡೆಯಲಾಗಿದೆ. ಇವರೆಲ್ಲಾ ಕಾಶ್ಮೀರದ ಪೂಂಛ್ ಜಿಲ್ಲೆಯವರು ಎಂದು ಕೊತ್ವಾಲಿ ಪೊಲೀಸ್‌ ಠಾಣೆಯ ಸ್ಟೇಷನ್‌ ಹೌಸ್‌ ಆಫೀಸರ್‌ (ಎಸ್‌ಎಚ್‌ಒ) ಶ್ರೀ ರಾಮ್ ಪಾಂಡೆ ತಿಳಿಸಿದ್ದಾರೆ.

ಪ್ರಧಾನಿ ಮೋದಿಯವರ ಅಯೋಧ್ಯೆ ಭೇಟಿ ಇರುವ ಕಾರಣ ಮುನ್ನೆಚ್ಚರಿಕಾ ಕ್ರಮವಾಗಿ ಅವರನ್ನು ವಶಕ್ಕೆ ಪಡೆಯಲಾಗಿದೆ. ಅವರನ್ನು ವಿಚಾರಣೆಗೆ ಒಳಪಡಿಸಿ ದಾಖಲೆಗಳನ್ನು ಪರಿಶೀಲನೆ ನಡೆಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

‘ಅವರು ಮದರಸದಲ್ಲಿ ಕೆಲಸ ಮಾಡುವುದಾಗಿಯೂ, ದೇಣಿಗೆ ಸಂಗ್ರಹಿಸಲು ಬರಾಂಬಕಿಗೆ ಬಂದಿದ್ದಾಗಿಯೂ, ಚಳಿಗಾಲದ ಸಮಯದಲ್ಲಿ ದೇಣಿಗೆ ಸಂಗ್ರಹಿಸಲು ದೇಶದ ವಿವಿಧ ಭಾಗಗಳಿಗೆ ತೆರಳುವುದಾಗಿಯೂ ಅವರು ವಿಚಾರಣೆ ವೇಳೆ ಹೇಳಿದ್ದಾರೆ ಎಂದು ಪಾಂಡೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT