ಪಟ್ನಾ: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಮೋದಿ ಅವರ ಕನಸಿನಲ್ಲಿ ಬಂದು ‘ಬಿಹಾರದಲ್ಲಿ ನನ್ನ ಹೆಸರು ಹೇಳಿಕೊಂಡು ರಾಜಕಾರಣ ಮಾಡುತ್ತಿದ್ದೀಯಾ’ ಎಂದು ಗದರಿಸುವಂತೆ ಎಐ ಆಧಾರಿತ ವಿಡಿಯೊ ಸೃಷ್ಟಿಸಿ ಅದನ್ನು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದ ಬಿಹಾರ ಕಾಂಗ್ರೆಸ್ ನಡೆಗೆ ಬಿಜೆಪಿ ತೀವ್ರ ಕಿಡಿಕಾರಿದೆ.

ಈ ಕುರಿತು ಮಾತನಾಡಿರುವ ಬಿಜೆಪಿ ರಾಷ್ಟ್ರೀಯ ವಕ್ತಾರ ಶಹಜಾದ್ ಪೂನಾವಾಲಾ ಅವರು, ರಾಜಕಾರಣದಲ್ಲಿ ವಿರೋಧಿಸುವ ಎಲ್ಲ ನಡೆಗಳನ್ನೂ ಬಿಹಾರ ಕಾಂಗ್ರೆಸ್ ಮೀರಿದೆ. ಇದು ಅಸಹ್ಯ ರಾಜಕಾರಣದ ಪರಮಾವಧಿ ಎಂದು ಕಿಡಿಕಾರಿದ್ದಾರೆ.

ಪ್ರಧಾನಿ ತಾಯಿಯನ್ನು ನಿಂದಿಸಿದ್ದಕ್ಕೆ ಪಶ್ಚಾತ್ತಾಪ ಪಡದ ಕಾಂಗ್ರೆಸ್, ಮತ್ತೆ ಪ್ರಧಾನಿ ತಾಯಿ ಬಗ್ಗೆ ಕೆಟ್ಟದಾಗಿ ವಿಡಿಯೊ ಮಾಡಿ ಅಟ್ಟಹಾಸ ಮೆರೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಹಾರ ಜನತೆ ಇದನ್ನೆಲ್ಲ ಗಮನಿಸುತ್ತಿದ್ದಾರೆ. ಸೂಕ್ತ ಸಮಯದಲ್ಲಿ ಕಾಂಗ್ರೆಸ್ ಹಾಗೂ ಅದನ್ನು ಬೆಂಬಲಿಸುವ ಆರ್ಜೆಡಿಗೆ ತಕ್ಕ ಉತ್ತರ ಕೊಡುತ್ತಾರೆ ಎಂದು ಹೇಳಿದ್ದಾರೆ.

ಬಿಜೆಪಿ ಹಿರಿಯ ನಾಯಕ ಅನುರಾಗ್ ಠಾಕೂರ್ ಅವರು, ಪದೇ ಪದೇ ಪ್ರಧಾನಿ ತಾಯಿಯನ್ನು ನಿಮ್ಮ ಹೊಲಸು ರಾಜಕಾರಣಕ್ಕೆ ಎಳೆದು ತರುತ್ತಿದ್ದೀರಿ, ವಿಧಾನಸಭೆ ಚುನಾವಣೆಯಲ್ಲಿ ನಿಮಗೆ ಬಿಹಾರ ಜನ ತಕ್ಕ ಶಾಸ್ತಿ ಮಾಡಲಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಹಾರ ಕಾಂಗ್ರೆಸ್ ಸೆಪ್ಟೆಂಬರ್ 10 ರಂದು ವಿಡಿಯೊ ಹಂಚಿಕೊಂಡಿದೆ. ಈ ವರ್ಷಾಂತ್ಯಕ್ಕೆ ಬಿಹಾರ ವಿಧಾನಸಭೆ ಚುನಾವಣೆ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.