ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಚಹಾ ಮಾರುತ್ತಿರುವ ಕೃತಕ ಬುದ್ಧಿಮತ್ತೆ (ಎಐ) ವಿಡಿಯೊವನ್ನು ಕಾಂಗ್ರೆಸ್ ನಾಯಕಿ ರಾಗಿಣಿ ನಾಯಕ್ ಹಂಚಿಕೊಂಡಿದ್ದು, ರಾಜಕೀಯಕ್ಕೆ ಬರುವುದಕ್ಕೂ ಮೊದಲು ಚಹಾ ಮಾರುತ್ತಿದ್ದರು ಎಂದು ಬರೆದುಕೊಂಡಿದ್ದಾರೆ.

ಸದ್ಯ ಈ ವಿಡಿಯೊ ವ್ಯಾಪಕವಾಗಿ ಹರಿದಾಡುತ್ತಿದೆ.

ಮೋದಿಯವರು ಸೂಟು ಧರಿಸಿ ರೆಡ್ ಕಾರ್ಪೆಟ್ ಮೇಲೆ ಚಹಾದ ಪಾತ್ರೆ ಹಿಡಿದುಕೊಂಡು ನಡೆಯುತ್ತಾ, ‘ಚಹಾ ಬೇಕಾ’ ಎಂದು ಕೂಗುತ್ತಿರುವ ದೃಶ್ಯ ಈ ಎಐ ವಿಡಿಯೊದಲ್ಲಿದೆ.

ಸದ್ಯ ಈ ವಿಡಿಯೊ ಬಿಜೆಪಿಯವರ ಕೆಂಗಣ್ಣಿಗೆ ಗುರಿಯಾಗಿದೆ. ಪ್ರಧಾನಿಯನ್ನು ಅವಮಾನಿಸಿದ್ದಾರೆ ಎಂದು ಕಿಡಿಕಾರಿರುವ ಬಿಜೆಪಿ, ಹಿಂದುಳಿದ ವರ್ಗಗಳ (ಒಬಿಸಿ) ಸಮುದಾಯದಿಂದ ಮತ್ತು ಬಡತನದ ಹಿನ್ನೆಲೆಯಿಂದ ಬಂದ ‘ಕಾಮ್ದಾರ್’ ಪ್ರಧಾನಿಯನ್ನು ಕಾಂಗ್ರೆಸ್ ಸಹಿಸುತ್ತಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನವಾಲಾ ಹೇಳಿದ್ದಾರೆ.

ಕಾಂಗ್ರೆಸ್ ಸಂಸದೆ ರೇಣುಕಾ ಚೌಧರಿ ಅವರು ನಾಯಿ ತರುವ ಮೂಲಕ ಸಂಸತ್ ಅನ್ನು ಅವಮಾನಿಸಿದ್ದಾರೆ. ಈಗ ರಾಗಿಣಿ ನಾಯಕ್ ಅವರು ಪ್ರಧಾನಿಯವರು ಚಹಾ ಮಾರುವ ಹಿನ್ನೆಲೆಯಿಂದ ಬಂದವರು ಎಂದು ಅಣಕಿಸುತ್ತಿದ್ದಾರೆ. 150ಕ್ಕೂ ಹೆಚ್ಚು ಬಾರಿ ಕಾಂಗ್ರೆಸ್ ಪ್ರಧಾನಿಯವರನ್ನು ಅವಮಾನಿಸಿದೆ. ಬಿಹಾರದಲ್ಲಿ ಮೋದಿಯವರ ತಾಯಿಯ ಬಗ್ಗೆಯೂ ಕೀಳಾಗಿ ಮಾತನಾಡಿದೆ ಎಂದು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಬರೆದುಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.