ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಸಮಯದಲ್ಲಿ ನಕಲಿ ಅಥವಾ ಮೃತರ ಹೆಸರು ಸೇರ್ಪಡೆಗೊಳಿಸುವುದನ್ನು ತಡೆಗಟ್ಟಲು ಚುನಾವಣಾ ಆಯೋಗವು ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ಪರಿಶೀಲನಾ ವ್ಯವಸ್ಥೆಯನ್ನು ಪರಿಚಯಿಸಲು ಸಜ್ಜಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

ಎಐನ ಮುಖ ಹೊಂದಾಣಿಕೆ ತಂತ್ರಜ್ಞಾನದ ಮೂಲಕ ಮತದಾರರ ಭಾವಚಿತ್ರಗಳ ಮುಖ ಹೋಲಿಕೆ ಮಾಡಿ ಮತದಾರರ ಪಟ್ಟಿಯಲ್ಲಿ ಇರುವ ವ್ಯಕ್ತಿಗಳ ಗುರುತನ್ನು ಪತ್ತೆ ಮಾಡಲಾಗುವುದು. ಇದರಿಂದ ಒಬ್ಬ ಮತದಾರರ ಭಾವಚಿತ್ರವು ಬೇರೆ ಬೇರೆ ಕಡೆಗಳಲ್ಲಿ ನೋಂದಣಿಯಾಗಿರುವುದನ್ನು ಪತ್ತೆ ಮಾಡಬಹುದು. ವಿಶೇಷವಾಗಿ ವಲಸೆ ಕಾರ್ಮಿಕರ ಭಾವಚಿತ್ರಗಳ ದುರುಪಯೋಗದ ಬಗ್ಗೆ ದೂರುಗಳು ಕೇಳಿಬರುತ್ತಿರುವ ಕಾರಣ ಎಐ ಸಹಾಯವನ್ನು ಪಡೆಯುತ್ತಿದ್ದೇವೆ ಎಂದು ಅಧಿಕಾರಿ ಪಿಟಿಐಗೆ ತಿಳಿಸಿದ್ದಾರೆ.

ಎಐನ ಬಳಕೆಯ ಹೊರತಾಗಿಯೂ ಬೂತ್ ಮಟ್ಟದ ಅಧಿಕಾರಿಗಳು ಮತದಾರರ ಮನೆಗೆ ಭೇಟಿ ನೀಡಿ ನೇರವಾಗಿ ಭಾವಚಿತ್ರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಬೂತ್ ಮಟ್ಟದ ಏಜೆಂಟ್ಗಳು ಭರ್ತಿ ಮಾಡಿದ ಸಲ್ಲಿಸಿದ ಅರ್ಜಿಗಳ ಪರಿಶೀಲನೆಗೆ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ತೆರಳಬೇಕಾಗುತ್ತದೆ. ಈ ವೇಳೆ ಅವರು ’ತಮ್ಮ ಉಪಸ್ಥಿತಿಯಲ್ಲಿ ಫಾರ್ಮ್ಗಳನ್ನು ಭರ್ತಿ ಮಾಡಲಾಗಿದೆ’ ಎಂದು ದೃಢೀಕರಿಸುವ ಕೈಬರಹದ ಹೇಳಿಕೆಗಳನ್ನು ಸಹ ಪಡೆಯುತ್ತಾರೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.