ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಮಿಳುನಾಡು ವಿಧಾನಸಭೆ ಚುನಾವಣೆ: ಪಳನಿಸ್ವಾಮಿ ಎಐಎಡಿಎಂಕೆ ಮುಖ್ಯಮಂತ್ರಿ ಅಭ್ಯರ್ಥಿ

2021ರ ತಮಿಳುನಾಡು ವಿಧಾನಸಭೆ ಚುನಾವಣೆ
Last Updated 7 ಅಕ್ಟೋಬರ್ 2020, 7:11 IST
ಅಕ್ಷರ ಗಾತ್ರ

ಚೆನ್ನೈ: 2021ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಎಐಎಡಿಎಂಕೆ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಅವರನ್ನು ಆಯ್ಕೆ ಮಾಡಲಾಗಿದೆ.

ಉಪಮುಖ್ಯಮಂತ್ರಿ ಒ. ಪನ್ನೀರ್‌ಸೆಲ್ವಂ ಅವರು ಬುಧವಾರ ಈ ಘೋಷಣೆ ಮಾಡಿದ್ದಾರೆ.

ಮುಖ್ಯಮಂತ್ರಿ ಅಭ್ಯರ್ಥಿಯಾಗಲು ಪಳನಿಸ್ವಾಮಿ ಮತ್ತು ಪನ್ನೀರ್‌ಸೆಲ್ವಂ ಅವರ ನಡುವೆ ಬಿರುಸಿನ ಪೈಪೋಟಿ ನಡೆದಿತ್ತು. ಈಗ ಇಬ್ಬರ ನಡುವಣ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿಕೊಳ್ಳಲಾಗಿದ್ದು, ರಾಜಿ ಸೂತ್ರ ರೂಪಿಸಲಾಗಿದೆ.

ರಾಜಿ ಸೂತ್ರದ ಅನ್ವಯ ಪಕ್ಷದ ಚಟುವಟಿಕೆಗಳ ಮೇಲೆ ನಿಗಾವಹಿಸಲು 11 ಸದಸ್ಯರ ಉಸ್ತುವಾರಿ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿಯಲ್ಲಿ ಪಳನಿಸ್ವಾಮಿ ಅವರ ಆರು ಮತ್ತು ಪನ್ನೀರ್‌ಸೆಲ್ವಂ ಅವರ ಐವರು ಬೆಂಬಲಿಗರಿದ್ದಾರೆ. ಪಳನಿಸ್ವಾಮಿ ಅವರ ಆರು ಬೆಂಬಲಿಗರು ಪ್ರಸ್ತುತ ಸಚಿವರಾಗಿದ್ದಾರೆ.

ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆಗೆ ಮುನ್ನ ಇಬ್ಬರು ನಾಯಕರು ಎಐಡಿಎಂಕೆ ಕಚೇರಿಯಲ್ಲಿ ಪಕ್ಷದ ನಾಯಕರ ಭಾವಚಿತ್ರಗಳಿಗೆ ಪುಷ್ಪ ನಮನ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಪಳನಿಸ್ವಾಮಿ ಅವರಿಗೆ ಪನ್ನೀರ್‌ಸೆಲ್ವಂ ಶಾಲು ಹೊದಿಸಿ ಅಭಿನಂದಿಸಿದರು. ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT