ಚೆನ್ನೈ: ದ್ರಾವಿಡ ರಾಜಕೀಯ ಹಾಗೂ ಸಂಸ್ಕೃತಿ ಬಗ್ಗೆ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು ನೀಡಿದ ವಿವಾದಾತ್ಮಕ ಹೇಳಿಕೆ ಹೊರತಾಗಿಯೂ, 2024ರ ಲೋಕಸಭೆ ಚುನಾವಣೆಯಲ್ಲಿ ಎಐಎಡಿಎಂಕೆ ಪಕ್ಷವು ಬಿಜೆಪಿ ಜತೆಗೆ ಮೈತ್ರಿ ಮುಂದುವರಿಸುವ ತೀರ್ಮಾನ ಕೈಗೊಂಡಿದೆ.

ಬುಧವಾರ ರಾತ್ರಿ ದೆಹಲಿಯಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಈ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಎಐಎಡಿಎಂಕೆ ಕಾರ್ಯದರ್ಶಿ ಎಡಪ್ಪಾಡಿ ಪಳನಿಸ್ವಾಮಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಹಾಜರಿದ್ದರು.

2024ರ ಲೋಕಸಭೆ ಚುನಾವಣೆಯಲ್ಲಿ ಎಐಎಡಿಎಂಕೆ ಜತೆ ಮೈತ್ರಿ ಮಾಡಿಕೊಳ್ಳಲು ಹೈಕಮಾಂಡ್ ನಿರ್ಧರಿಸಿದರೆ, ತಾನು ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ತೊರೆಯಲಿದ್ದೇನೆ ಎಂದು ಅಣ್ಣಾಮಲೈ ಅವರು ಹೇಳಿದ್ದಾಗಿ ವರದಿಯಾಗಿತ್ತು. ಈ ಬಗ್ಗೆಯೂ ಸಭೆಯಲ್ಲಿ ಚರ್ಚೆಯಾಗಿದೆ.

ಪರಸ್ಪರ ಗೌರವದಿಂದ ಎರಡೂ ಪಕ್ಷಗಳು 2024ರ ಲೋಕಸಭಾ ಚುನಾವಣೆಗೆ ಮೈತ್ರಿ ಮಾಡಲು ಒಪ್ಪಿಕೊಂಡಿವೆ ಎಂದು ನಂಬಲಾರ್ಹ ಮೂಲಗಳು ತಿಳಿಸಿವೆ. ಎರಡೂ ಪಕ್ಷಗಳ ಗಟ್ಟಿಯಾದ ಮೈತ್ರಿಯಿಂದಾಗಿ ತಮಿಳುನಾಡಿನಲ್ಲಿ ಡಿಎಂಕೆಯನ್ನು ಮಣಿಸಿ ಹೆಚ್ಚಿನ ಲೋಕಸಭಾ ಕ್ಷೇತ್ರಗಳನ್ನು ಗೆಲ್ಲಬೇಕು ಎಂದು ಯೋಜನೆ ರೂಪಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.