ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ನಾಳೆ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಪಳನಿಸ್ವಾಮಿ ಅಧ್ಯಕ್ಷತೆಯಲ್ಲಿ ಸಭೆ

Published 24 ಸೆಪ್ಟೆಂಬರ್ 2023, 14:43 IST
Last Updated 24 ಸೆಪ್ಟೆಂಬರ್ 2023, 14:43 IST
ಅಕ್ಷರ ಗಾತ್ರ

ಚೆನ್ನೈ: ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ.ಪಳನಿಸ್ವಾಮಿ ಅಧ್ಯಕ್ಷತೆಯಲ್ಲಿ ಪಕ್ಷದ ಪ್ರಮುಖ ಪದಾಧಿಕಾರಿಗಳು, ಶಾಸಕರು ಮತ್ತು ಜಿಲ್ಲಾ ಮಟ್ಟದ ಕಾರ್ಯದರ್ಶಿಗಳ ಸಭೆ ಸೆ.25 ರಂದು ನಡೆಯಲಿದೆ. 

ಸಭೆಯಲ್ಲಿ ಕಾರ್ಯಸೂಚಿಯನ್ನು ಈವರೆಗೂ ಬಹಿರಂಗಪಡಿಸಿಲ್ಲ. ಹಿಂದಿನ ಮಿತ್ರ ಪಕ್ಷ ಬಿಜೆಪಿಯೊಂದಿಗಿನ ಸಂಬಂಧವು ಹದಗೆಟ್ಟ ಹಿನ್ನೆಲೆಯಲ್ಲಿ ಈ ಸಭೆ ಮಹತ್ವ ಪಡೆದಿದೆ.

‘ಬಿಜೆಪಿಯೊಂದಿಗೆ ಯಾವುದೇ ಮೈತ್ರಿ ಇಲ್ಲ ಎಂಬ ಪಕ್ಷದ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ’ ಎಂದು ಎಐಎಡಿಎಂಕೆ ಹಿರಿಯ ಮುಖಂಡ ಡಿ.ಜಯಕುಮಾರ್ ಹೇಳಿದ್ದಾರೆ.

ಈ ವಿಚಾರವಾಗಿ ಹೆಚ್ಚಿನ ಮಾಹಿತಿ ನೀಡಲು ನಿರಾಕರಿಸಿದ ಅವರು, ಸೋಮವಾರದ ಈ ವಿಷಯ ಚರ್ಚೆಗೆ ಬರುವ ಸಾಧ್ಯತೆ ಇದೆ ಎಂದರು.

ದಿವಂಗತ ದ್ರಾವಿಡ ನಾಯಕ ಸಿ.ಎನ್.ಅಣ್ಣಾದೊರೈ ಅವರ ಬಗ್ಗೆ ನೀಡಿದ ಹೇಳಿಕೆಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಅಣ್ಣಾಮಲೈ ಕ್ಷಮೆಯಾಚಿಸಬೇಕು ಎಂದು ಎಐಎಡಿಎಂಕೆ ಒತ್ತಾಯಿಸಿದೆ. ಈ ವಿಚಾರ ಕುರಿತು ಉಭಯ ನಾಯಕರ ನಡುವೆ ವಾಕ್ಸಮರ ನಡೆಯಿತು. ಸೆ. 18 ರಂದು ಬಿಜೆಪಿಯೊಂದಿಗಿನ ಮೈತ್ರಿಯನ್ನು ಜಯಕುಮಾರ್ ರದ್ದುಗೊಳಿಸಿದ್ದರು.

ಶುಕ್ರವಾರ ದೆಹಲಿಗೆ ತೆರಳಿದ ಎಐಎಡಿಎಂಕೆ ನಿಯೋಗಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲು ಸಾಧ್ಯವಾಗಲಿಲ್ಲ. ಆದರೆ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ತಮಿಳುನಾಡಿನ ಉಸ್ತುವಾರಿ ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿ ಚರ್ಚಿಸಿತು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT