ತಿರುಪತಿ: ತಿರುಮಲದ ವೆಂಕಟೇಶ್ವರ ದೇವಸ್ಥಾನಕ್ಕೆ ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ) ಮಂಡಳಿ ಸದಸ್ಯ ಮತ್ತು ಎಐಎಡಿಎಂಕೆ ಶಾಸಕ ಆರ್. ಕುಮಾರಗುರು ಶನಿವಾರ ₹3.16 ಕೋಟಿ ದೇಣಿಗೆ ನೀಡಿದ್ದಾರೆ.

ಈ ದೇಣಿಗೆಯಿಂದ ತಮಿಳುನಾಡಿನ ತಮ್ಮ ವಿಧಾನಸಭಾ ಕ್ಷೇತ್ರವಾದ ಉಳುಂದುರ್ಪೆಟೈನಲ್ಲಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನ ನಿರ್ಮಿಸುವಂತೆ ಕೋರಿದ್ದಾರೆ ಎಂದು ಟಿಟಿಡಿ ಅಧ್ಯಕ್ಷ ವೈ.ವಿ. ಸುಬ್ಬಾರೆಡ್ಡಿ ತಿಳಿಸಿದ್ದಾರೆ.

ದೇವಸ್ಥಾನಕ್ಕಾಗಿ ನಾಲ್ಕು ಎಕರೆಯ ಜಾಗದ ದಾಖಲೆಗಳನ್ನು ಸಹ ಕುಮಾರಗುರು ನೀಡಿದ್ದಾರೆ. ಹೀಗಾಗಿ, ದೇವಸ್ಥಾನ ನಿರ್ಮಾಣಕ್ಕೆ ಶಂಕುಸ್ಥಾಪನೆಯ ದಿನಾಂಕವನ್ನು ಶೀಘ್ರ ನಿಗದಿಪಡಿಸಲಾಗುವುದು ಎಂದು ಸುಬ್ಬಾರೆಡ್ಡಿ ತಿಳಿಸಿದ್ದಾರೆ.

ಶಾಸಕ ಕುಮಾರಗುರು ಕಳೆದ ವರ್ಷ ಡಿಸೆಂಬರ್ 25ರಂದು ಈ ದೇವಸ್ಥಾನ ನಿರ್ಮಿಸಲು ₹1 ಕೋಟಿ ದೇಣಿಗೆ ನೀಡಿದ್ದರು ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.