ಚೆನ್ನೈ: ಎಐಎಡಿಎಂಕೆ ಪ್ರಭಾವಿ ನಾಯಕ ಸಿ.ವಿ. ಷಣ್ಮುಗಂ ಅವರು ತಮ್ಮ ರಾಜ್ಯಸಭಾ ಸ್ಥಾನಕ್ಕೆ ಗುರುವಾರ (ಮೇ.7) ರಾಜೀನಾಮೆ ನೀಡಿದ್ದಾರೆ. ಇತ್ತೀಚೆಗೆ ನಡೆದ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಮೈಲಂ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಅವರು ಈ ನಿರ್ಧಾರ ಕೈಗೊಂಡಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಾನು ನನ್ನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಸದ್ಯಕ್ಕೆ ಇಷ್ಟು ಮಾತ್ರ ಹೇಳಬಲ್ಲೆ, ಧನ್ಯವಾದಗಳು’ ಎಂದು ತಿಳಿಸಿದರು.

ಷಣ್ಮುಗಂ ಅವರ ಈ ನಡೆ ತಮಿಳುನಾಡು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ರಾಜ್ಯದಲ್ಲಿ ಎಐಎಡಿಎಂಕೆ ಮತ್ತು ದಳಪತಿ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ' (ಟಿವಿಕೆ) ನಡುವೆ ಮೈತ್ರಿ ಏರ್ಪಡಬಹುದು ಅಥವಾ ಡಿಎಂಕೆ ಜೊತೆ ಹೊಸ ರಾಜಕೀಯ ಸಮೀಕರಣಗಳು ಸೃಷ್ಟಿಯಾಗಬಹುದು ಎಂಬ ವದಂತಿಗಳ ನಡುವೆಯೇ ರಾಜೀನಾಮೆ ಕೊಟ್ಟಿದ್ದಾರೆ.

ಮೈತ್ರಿ ಅಥವಾ ಹೊಸ ಸರ್ಕಾರ ರಚನೆಯ ಕುರಿತಾದ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ‘ಈ ಬಗ್ಗೆ ನನಗೇನೂ ತಿಳಿದಿಲ್ಲ, ನಾನು ಈಗಲೇ ಏನನ್ನೂ ಹೇಳಲು ಸಾಧ್ಯವಿಲ್ಲ’ ಎನ್ನುವ ಮೂಲಕ ಅಂತರ ಕಾಯ್ದುಕೊಂಡರು.

ವಿಲ್ಲುಪುರಂ ಭಾಗದ ವನ್ನಿಯಾರ್ ಸಮುದಾಯದ ಪ್ರಭಾವಿ ನಾಯಕರಾಗಿರುವ ಷಣ್ಮುಗಂ, 2022ರಿಂದ ರಾಜ್ಯಸಭಾಯ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದರು. ಏಪ್ರಿಲ್ 23ರಂದು ನಡೆದ ಚುನಾವಣೆಯಲ್ಲಿ ಶಾಸಕರಾಗಿ ಆಯ್ಕೆಯಾದ ಕಾರಣ, ನಿಯಮದಂತೆ ಅವರು ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಒಟ್ಟಾರೆಯಾಗಿ ಅವರ ಈ ನಡೆ ತಮಿಳುನಾಡಿನ ಮುಂದಿನ ರಾಜಕೀಯ ಬೆಳವಣಿಗೆಗಳ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ ಎಂಬುದನ್ನು ಕಾದುನೋಡಬೇಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.