ಚೆನ್ನೈ: ತಮಿಳುನಾಡು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಟಿವಿಕೆ ಪಕ್ಷದ ಮುಖ್ಯಸ್ಥ ಜೋಸೆಫ್ ವಿಜಯ್ ನಾಳೆ(ಮೇ 13) ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಮಾಡಲಿದ್ದಾರೆ. ಈ ಸಂದರ್ಭ ವಿಶ್ವಾಸಮತದ ವಿರುದ್ಧ ಮತ ಹಾಕಲು ಎಐಎಡಿಎಂಕೆ ನಿರ್ಧರಿಸಿದೆ ಎಂದು ಹಿರಿಯ ನಾಯಕ ಅಗ್ರಿ ಎಸ್ ಎಸ್ ಕೃಷ್ಣಮೂರ್ತಿ ಹೇಳಿದ್ದಾರೆ.

ಅಡ್ಡ ಮತದಾನದ ಸಾಧ್ಯತೆ ಹೆಚ್ಚಿದ್ದು, ಅಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ತಿಳಿಸಿದ್ದಾರೆ.

ಒ.ಎಸ್. ಮಣಿಯನ್ ಮತ್ತು ಪಳಸ್ವಾಮಿ ಬಣದ ಇತರ ಶಾಸಕರ ಜೊತೆ ಸುದ್ದಿಗೋಷ್ಠಿ ನಡೆಸಿದ ಅವರು, ಈ ಬಗ್ಗೆ ಪಕ್ಷದ ಪ್ರಧಾನ ಕಾರ್ಯದರ್ಶಿ ನಿರ್ಧಾರ ಕೈಗೊಂಡಿರುವುದಾಗಿ ಹೇಳಿದ್ದಾರೆ.

'ಎಐಎಡಿಎಂಕೆಯ ಶಾಸಕರು ನಾಳೆ ವಿಶ್ವಾಸಮತ ಯಾಚನೆಯ ವಿರುದ್ಧ ಮತ ಚಲಾಯಿಸಲು ಪ್ರಧಾನ ಕಾರ್ಯದರ್ಶಿ ನಿರ್ಧರಿಸಿದ್ದಾರೆ’ಎಂದು ಕೃಷ್ಣಮೂರ್ತಿ ಹೇಳಿದ್ದು, ಪಕ್ಷದ ಎಲ್ಲ ಶಾಸಕರಿಗೆ ನಿರ್ದೇಶನ ಪಾಲಿಸಲು ಅಧಿಕೃತವಾಗಿ ತಿಳಿಸಲಾಗಿದೆ ಎಂದಿದ್ದಾರೆ.

ಸಂಭಾವ್ಯ ಅಡ್ಡ ಮತದಾನದ ಕುರಿತಾದ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ಕಠಿಣ ಕಾನೂನು ಕ್ರಮದ ಎಚ್ಚರಿಕೆ ನೀಡಿದರು. ಅಗತ್ಯವಿದ್ದರೆ ಪಕ್ಷಾಂತರ ನಿಷೇಧ ಕಾನೂನಿನ ಅಡಿಯಲ್ಲಿ ದಾವೆ ಹೂಡುವುದಾಗಿ ಹೇಳಿದರು.

ಈ ಮಧ್ಯೆ, ಪಕ್ಷದೊಳಗೆ ಒಡಕಿದೆ ಎಂಬ ವರದಿಗಳನ್ನು ತಳ್ಳಿಹಾಕಿದ ಮಣಿಯನ್, ಪಳನಿಸ್ವಾಮಿ ಅವರ ನಾಯಕತ್ವದಲ್ಲಿ ಎಐಎಡಿಎಂಕೆ ಒಗ್ಗಟ್ಟಿನಿಂದ ಮುನ್ನಡೆಯುತ್ತಿದೆ ಎಂದು ಪ್ರತಿಪಾದಿಸಿದರು.

ಪಳನಿಸ್ವಾಮಿ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ದೃಢಪಡಿಸುವ ಸಹಿ ಮಾಡಿದ ಪತ್ರವನ್ನೂ 47 ಶಾಸಕರು ಈಗಾಗಲೇ ಸ್ಪೀಕರ್ಗೆ ಸಲ್ಲಿಸಿದ್ದಾರೆ ಎಂದೂ ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.