ನವದೆಹಲಿ: ಅಖಿಲ ಭಾರತ ವಕೀಲರ ಪರೀಕ್ಷೆ (ಎಐಬಿಇ)ಯನ್ನು ವರ್ಷದಲ್ಲಿ ಎರಡು ಬಾರಿ ನಡೆಸಲು ಅನುಕೂಲವಾಗುವಂತೆ ನಿಯಮಗಳನ್ನು ರೂಪಿಸಲಾಗಿದೆ ಎಂದು ಸುಪ್ರೀಂ ಕೋರ್ಟ್ಗೆ ಭಾರತೀಯ ವಕೀಲರ ಪರಿಷತ್ತು(ಬಿಸಿಐ) ಮಂಗಳವಾರ ತಿಳಿಸಿದೆ.

ನೂತನ ನಿಯಮಗಳಿಂದಾಗಿ, ಕಾನೂನು ಪದವಿಯ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಕೂಡ ಅಖಿಲ ಭಾರತ ವಕೀಲರ ಪರೀಕ್ಷೆ ಬರೆಯಲು ಸಾಧ್ಯವಾಗಲಿದೆ ಎಂದು ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಹಾಗೂ ಸಂದೀಪ್ ಮೆಹ್ತಾ ಅವರು ಇದ್ದ ಪೀಠಕ್ಕೆ ಬಿಸಿಐ ತಿಳಿಸಿದೆ.

ಕಾನೂನು ಪದವಿಯ ಅಂತಿಮ ಸೆಮಿಸ್ಟರ್ ವಿದ್ಯಾರ್ಥಿಗಳು ಕೂಡ ಎಐಬಿಇ ಬರೆಯಲು ಅನುಮತಿ ನೀಡಬೇಕು ಎಂದು ನಿರ್ದೇಶಿಸುವಂತೆ ಕೋರಿ 2024ರಲ್ಲಿ 9 ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆಯನ್ನು ಪೀಠ ನಡೆಸಿತು.

ಈ ಕುರಿತು ಬಿಸಿಐ ಹೇಳಿಕೆಯನ್ನು ದಾಖಲಿಸಿಕೊಂಡ ಪೀಠ, ಅರ್ಜಿಯ ವಿಲೇವಾರಿ ಮಾಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.