ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭೆ ಚುನಾವಣೆ: ಎಐಎಡಿಎಂಕೆಗೆ ಒವೈಸಿ ಬೆಂಬಲ

Published 13 ಏಪ್ರಿಲ್ 2024, 13:04 IST
Last Updated 13 ಏಪ್ರಿಲ್ 2024, 13:04 IST
ಅಕ್ಷರ ಗಾತ್ರ

ಹೈದರಾಬಾದ್: ಲೋಕಸಭಾ ಚುನಾವಣೆಯಲ್ಲಿ ತಮಿಳುನಾಡಿನಲ್ಲಿ ಎಐಎಡಿಎಂಕೆಗೆ ಬೆಂಬಲ ನೀಡುತ್ತೇವೆ ಎಂದು ಎಐಎಂಐಎಂ ಘೋಷಿಸಿದೆ.

‘ಈ ಮೈತ್ರಿಯು ವಿಧಾನಸಭಾ ಚುನಾವಣೆಯಲ್ಲೂ ಮುಂದುವರಿಯಲಿದೆ’ ಎಂದು ಪಕ್ಷದ ಅಧ್ಯಕ್ಷ ಅಸಾದುದ್ದೀನ್‌ ಒವೈಸಿ ಅವರು ಶನಿವಾರ ‘ಎಕ್ಸ್‌’ನಲ್ಲಿ ಪ್ರಕಟಿಸಿದರು.

‘ಎಐಎಡಿಎಂಕೆಯು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲು ನಿರಾಕರಿಸಿದೆಯಲ್ಲದೆ, ಭವಿಷ್ಯದಲ್ಲಿ ಎಂದಿಗೂ ಆ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದಿದೆ. ಸಿಎಎ, ಎನ್‌ಪಿಆರ್ ಮತ್ತು ಎನ್‌ಆರ್‌ಸಿಯನ್ನು ವಿರೋಧಿಸುವುದಾಗಿಯೂ ಅದು ಭರವಸೆ ನೀಡಿದೆ. ಆದ್ದರಿಂದ, ಲೋಕಸಭಾ ಚುನಾವಣೆಯಲ್ಲಿ ಎಐಎಡಿಎಂಕೆಗೆ ಬೆಂಬಲ ನೀಡುತ್ತೇವೆ’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT